ವಕ್ಫ್‌ ಮಂಡಳಿ ಅಧಿಕಾರಿಗಳ ಧೋರಣೆ ಖಂಡಿಸಿ ಪ್ರತಿಭಟನೆ

7

ವಕ್ಫ್‌ ಮಂಡಳಿ ಅಧಿಕಾರಿಗಳ ಧೋರಣೆ ಖಂಡಿಸಿ ಪ್ರತಿಭಟನೆ

Published:
Updated:
ವಕ್ಫ್‌ ಮಂಡಳಿ ಅಧಿಕಾರಿಗಳ ಧೋರಣೆ ಖಂಡಿಸಿ ಪ್ರತಿಭಟನೆ

ಧಾರವಾಡ: ನವಲಗುಂದ ಅಂಜುಮನ್ ಇಸ್ಲಾಂ ಸಂಸ್ಥೆಯ ಶಾದಿ ಮಹಲ್ ಕಟ್ಟಡವನ್ನು ಕಾನೂನುಬಾಹಿರವಾಗಿ ನಿರ್ಮಾಣ ಮಾಡಲು ಅವಕಾಶ ಮಾಡಿಕೊಟ್ಟ ಜಿಲ್ಲಾ ವಕ್ಫ್ ಮಂಡಳಿ ಅಧಿಕಾರಿಗಳ ಧೋರಣೆ ಖಂಡಿಸಿ ಮುಸ್ಲಿಂ ಸಮುದಾಯದವರು ಧಾರವಾಡದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಜಿಲ್ಲಾ ವಕ್ಫ್ ಕಚೇರಿ ಎದುರು ಪ್ರತಿಭಟಿಸಿದ ಮುಖಂಡರು, ‘ಕಳೆದ ಏಳು ವರ್ಷಗಳಿಂದ ಚುನಾವಣೆ ನಡೆದಿಲ್ಲ. ಶಾದಿ ಮಹಲ್‌ಗೆ ಈ ಹಿಂದೆ ₹30 ಲಕ್ಷ ಬಿಡುಗಡೆಯಾಗಿತ್ತು. ಆದರೆ, ಕಾಮಗಾರಿ ಅರ್ಧದಲ್ಲೇ ನಿಂತಿದೆ. ಪೂರ್ಣಗೊಳ್ಳಲು ಇನ್ನೂ ₹30 ಲಕ್ಷ ಅಗತ್ಯವಿದೆ. ಸರ್ಕಾರ ಬಿಡುಗಡೆ ಮಾಡಿರುವ ಹಣವನ್ನು ಕಾನೂನುಬಾಹಿರವಾಗಿ ಕೊಳ್ಳೆಹೊಡೆಯಲು ಕೆಲವರು ಮುಂದಾಗಿದ್ದಾರೆ’ ಎಂದು ಆರೋಪಿಸಿದರು.

‘ಅಂಜುಮನ್ ಸಂಸ್ಥೆಗೆ ಚುನಾವಣೆ ನಡೆಸಬೇಕು. ಈಗ ನೇಮಿಸಿರುವ ಅಡಹಾಕ್ ಕಮಿಟಿಯನ್ನು ರದ್ದುಗೊಳಿಸಬೇಕು’ ಎಂದು ಆಗ್ರಹಿಸಿದರು.

ಎಂ.ಬಿ. ಮುಲ್ಲಾ, ಖಾಜಾಸಾಬ ಹಂಚಿನಾಳ, ರಾಜೇಸಾಬ ಜಾಲಿಹಾಳ, ರಿಯಾಜ್ ನಾಶಿಪುಡಿ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry