ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಮತಾ ಬ್ಯಾನರ್ಜಿಯ ತೃತೀಯರಂಗ ರಚನೆ ಕಸರತ್ತು: ಎಸ್‌ಪಿ, ಬಿಎಸ್‌ಪಿ, ಎನ್‌ಸಿಪಿ ಪಕ್ಷಗಳ ಬೆಂಬಲ

Last Updated 27 ಮಾರ್ಚ್ 2018, 10:35 IST
ಅಕ್ಷರ ಗಾತ್ರ

ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ  ಮಮತಾ ಬ್ಯಾನರ್ಜಿ 2019ರಲ್ಲಿ ನಡೆಯುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ಕಾರ್ಯತಂತ್ರ ರೂಪಿಸುತ್ತಿದ್ದು, ತೃತೀಯರಂಗ ರಚನೆಗೆ ಮುಂದಾಗಿದ್ದಾರೆ.

ನವದೆಹಲಿಯಲ್ಲಿ ಬೀಡು ಬಿಟ್ಟಿರುವ ಮಮತಾ ಬ್ಯಾನರ್ಜಿ ಸಮಾನ ಮನಸ್ಕ ಪಕ್ಷಗಳೊಂದಿಗೆ ಸಮಾಲೋಚನೆ ನಡೆಸುತ್ತಿದ್ದಾರೆ. ಮಂಗಳವಾರ ರಾತ್ರಿ ಎನ್‌ಸಿಪಿ ಮುಖಂಡ ಶರಾದ್‌ ಪವಾರ್‌ ಅವರನ್ನು ಭೇಟಿ ಮಾಡಲಿದ್ದಾರೆ.

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಜೊತೆಗೂ ಮಮತಾ ಮಾತುಕತೆ ನಡೆಸುವ ಸಾಧ್ಯತೆಗಳಿವೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಪಶ್ಚಿಮ ಬಂಗಾಳದಲ್ಲಿ ಪ್ರಮುಖ ವಿರೋಧ ಪಕ್ಷವಾಗಿರುವ ಸಿಪಿಎಂ ಕೂಡ ರಾಷ್ಟ್ರಮಟ್ಟದಲ್ಲಿ ಮಮತಾ ಬ್ಯಾನರ್ಜಿಗೆ ಬೆಂಬಲ ನೀಡುವ ಬಗ್ಗೆ ಆ ಪಕ್ಷದೊಳಗೆ ಚರ್ಚೆಗಳು ನಡೆಯುತ್ತಿವೆ ಎನ್ನಲಾಗಿದೆ.

ಈಗಾಗಲೇ ಬಿಎಸ್‌ಪಿ, ಸಮಾಜವಾದಿ ಪಕ್ಷಗಳ ಮುಖಂಡರ ಜೊತೆ ಮಮತಾ ಮಾತುಕತೆ ನಡೆಸಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಜೆಡಿಎಸ್‌ನೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಬಗ್ಗೆ ಅವರು ಸಲಹೆ ಮಾಡಿದ್ದಾರೆ. ಆದಾಗ್ಯೂ ಅದು ಕಾಂಗ್ರೆಸ್‌ ಪಕ್ಷಕ್ಕೆ ಬಿಟ್ಟ ವಿಚಾರವಾಗಿದೆ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT