ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂವಿಧಾನದ 370ನೇ ಕಲಂ ರದ್ದುಪಡಿಸುವ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ: ಹಂಸರಾಜ್ ಗಂಗಾರಾಮ್ ಆಹಿರ್

Last Updated 27 ಮಾರ್ಚ್ 2018, 13:14 IST
ಅಕ್ಷರ ಗಾತ್ರ

ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370ನೇ ಕಲಂ ರದ್ದುಪಡಿಸುವ ಪ್ರಸ್ತಾಪ ಸರ್ಕಾರದ ಬಳಿ ಇಲ್ಲ ಎಂದು ಕೇಂದ್ರ ಸರ್ಕಾರ ಮಂಗಳವಾರ ಲೋಕಸಭೆಗೆ ಮಾಹಿತಿ ನೀಡಿದೆ.

ಕಲಂ 370 ರದ್ದುಪಡಿಸಲು ಸರ್ಕಾರ ಬದ್ಧವಾಗಿದೆಯೆ ಎನ್ನುವ ಬಿಜೆಪಿ ಸಂಸದ ಅಶ್ವಿನಿ ಕುಮಾರ್ ಅವರ ಲಿಖಿತ ಪ್ರಶ್ನೆಗೆ ಉತ್ತರಿಸುವ ವೇಳೆ ಕೇಂದ್ರ ಗೃಹ ಇಲಾಖೆಯ ರಾಜ್ಯ ಸಚಿವ ಹಂಸರಾಜ್ ಗಂಗಾರಾಮ್ ಆಹಿರ್ ಈ ವಿಷಯ ತಿಳಿಸಿದ್ದಾರೆ.

ಲೋಕಸಭೆಯಲ್ಲಿ ವಿಷಯ ಪ್ರಸ್ತಾಪಿಸಿ ಮಾತನಾಡಿದ ಅಹಿರ್‌ ಅವರು ಸಂವಿಧಾನದ 370ನೇ ಕಲಂ ರದ್ದುಪಡಿಸಲಾಗುತ್ತದೆ ಎಂದು ಕೆಲವರು ಗಾಳಿ ಸುದ್ದಿ ಹರಡಿದ್ದರು. ಇಂತಹ ಯಾವುದೇ ಪ್ರಸ್ತಾವನೆಗಳು ಸದ್ಯ ಸರ್ಕಾರದ ಮುಂದೆ ಇಲ್ಲ ಎಂದು ಸ್ಪಷ್ಟಪಡಿಸಿದರು.

370ನೇ ಕಲಂ ರದ್ದುಪಡಿಸುವುದು ಬಿಜೆಪಿಯ ರಾಜಕೀಯ ಪ್ರಣಾಳಿಕೆಯಲ್ಲಿ ಇದೆ. ಆದರೆ ಅಲ್ಲಿನ ಪಿಡಿಪಿ ಪಕ್ಷ ಈ ಬಗ್ಗೆ ಮೌನವಹಿಸಿರುವುದರಿಂದ ರದ್ದುಪಡಿಸುವ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಎಂದರು.

ಕಣಿವೆ ರಾಜ್ಯದಲ್ಲಿ ಶಾಂತಿ ಸ್ಥಾಪನೆ ಮಾಡಲು ಸರ್ಕಾರ ಬದ್ದವಾಗಿದೆ. ಪ್ರತ್ಯೇಕವಾದಿಗಳ ಜೊತೆ ಮಾತನಾಡಲು ಸರ್ಕಾರ ಸಿದ್ಧ ಎಂದು ಅವರು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT