ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷಿ ಕ್ಷೇತ್ರದಲ್ಲಿ ಉದ್ಯೋಗ ಅವಕಾಶ

Last Updated 27 ಮಾರ್ಚ್ 2018, 19:30 IST
ಅಕ್ಷರ ಗಾತ್ರ

ಬೆಂಗಳೂರು: ಕೃಷಿ ಮತ್ತು ಸಂಬಂಧಿಸಿದ ಕ್ಷೇತ್ರಗಳಲ್ಲಿ ಉದ್ಯೋಗ ಅವಕಾಶಗಳ ಬಗ್ಗೆ ಯುವಕರಲ್ಲಿ ಕೆಲ ಮಟ್ಟಿಗೆ ಗೊಂದಲ ಇರುವುದು ಉದ್ಯೋಗ ಅವಕಾಶಗಳ ಕುರಿತ ಅಂತರ್ಜಾಲ ತಾಣ ಇಂಡೀಡ್‌ ನಡೆಸಿದ ಅಧ್ಯಯನ ವರದಿಯಲ್ಲಿ ತಿಳಿದು ಬಂದಿದೆ.

21 ರಿಂದ 25 ವರ್ಷ ವಯಸ್ಸಿನ ಉದ್ಯೋಗ ಆಕಾಂಕ್ಷಿಗಳು  ಕೃಷಿ ಸಂಬಂಧಿತ ಉದ್ಯೋಗಗಳಲ್ಲಿ ಹೆಚ್ಚಿನ ಆಸಕ್ತಿ ತೋರಿಸುತ್ತಿಲ್ಲ. ಸೇವಾ ಭದ್ರತೆ ಇಲ್ಲದಿರುವುದು, ಅವಕಾಶಗಳ ಬಗ್ಗೆ ಮಾಹಿತಿ ಕೊರತೆಯೇ  ಇದಕ್ಕೆ ಕಾರಣವಾಗಿದೆ. ಆದರೆ, 31 ರಿಂದ 35 ವರ್ಷ ವಯಸ್ಸಿನವರು ಇದೇ ವಲಯದಲ್ಲಿ ಹೆಚ್ಚಿನ ಒಲವು ತೋರಿಸುತ್ತಿದ್ದಾರೆ.

ಕೃಷಿಕರು ಯಾಂತ್ರೀಕರಣಕ್ಕೆ ಒತ್ತು ನೀಡುತ್ತಿರುವುದು ಈ ಕ್ಷೇತ್ರದಲ್ಲಿನ ಬೆಳವಣಿಗೆ ಬಗ್ಗೆ ಈ ವಯೋಮಾನದವರಲ್ಲಿ ಭರವಸೆ ಮೂಡಿಸಿದೆ. 2022ರ ವೇಳೆಗೆ ಕೃಷಿ ಆದಾಯವನ್ನು ದುಪ್ಪಟ್ಟುಗೊಳಿಸಲು ಸರ್ಕಾರ ಒತ್ತು ನೀಡಿರುವುದು ಹೆಚ್ಚು ಆಕರ್ಷಕವಾಗಿ ಕಾಣುತ್ತಿದೆ ಎಂದು ವರದಿ ತಿಳಿಸಿದೆ.

ಕೃಷಿ ಕ್ಷೇತ್ರವು ಈಗಲೂ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗಾವಕಾಶ ನೀಡುತ್ತಿದೆ. ಆರೋಗ್ಯಕರ ಆಹಾರ ಪದ್ಧತಿಯು ಉದ್ಯೋಗಾವಕಾಶಗಳ ಸೃಷ್ಟಿಯ ಜೊತೆಗೆ ಈ ಕ್ಷೇತ್ರದಲ್ಲಿ ಹೆಚ್ಚಿನ ಯುವಜನರು ತೊಡಗಿಕೊಳ್ಳಲು ಉತ್ತೇಜನ ನೀಡಲಿದೆ.

ಸರ್ಕಾರವು ಕೃಷಿ ವಲಯದ ಅಭಿವೃದ್ಧಿಗೆ ಒತ್ತು ನೀಡುತ್ತಿರುವುದು ಹಾಗೂ ಗ್ರಾಮೀಣ ಆರ್ಥಿಕ ವ್ಯವಸ್ಥೆಗೆ ಆದ್ಯತೆ ನೀಡುವ ಕಾರ್ಯಕ್ರಮಗಳು ಉದ್ಯೋಗ ಆಕಾಂಕ್ಷಿಗಳು ಕೃಷಿ ಸಂಬಂಧಿತ ಮಾರುಕಟ್ಟೆಯಿಂದ ಹೆಚ್ಚಿನದನ್ನು ನಿರೀಕ್ಷಿಸಲು ಸಾಧ್ಯವಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

‘ಈ ವಲಯದಲ್ಲಿನ ವಿವಿಧ ಕೋರ್ಸ್‌ಗಳಿಂದಾಗಿ  ಹೆಚ್ಚಿನ ಪ್ರಮಾಣದಲ್ಲಿ ವೃತ್ತಿಪರರನ್ನು ನಿರೀಕ್ಷಿಸುವುದು ಸಾಧ್ಯವಾಗಲಿದೆ’ ಎಂದು ಇಂಡೀಡ್‌ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಶಶಿ ಕುಮಾರ್‌ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT