ಶಾಸಕ ಸವದಿ ಬೆಂಬಲಿಗರಿಂದ ಹಲ್ಲೆ: ದೂರು

7

ಶಾಸಕ ಸವದಿ ಬೆಂಬಲಿಗರಿಂದ ಹಲ್ಲೆ: ದೂರು

Published:
Updated:

ಅಥಣಿ (ಬೆಳಗಾವಿ ಜಿಲ್ಲೆ): ಪಟ್ಟಣದಲ್ಲಿ ಅಂಬಿಗರ ಚೌಡಯ್ಯ ಸಮುದಾಯ ಭವನ ನಿರ್ಮಾಣಕ್ಕಾಗಿ ಮಂಗಳವಾರ ಅಡಿಗಲ್ಲು ಹಾಕುವ ಸಂದರ್ಭದಲ್ಲಿ, ಶಾಸಕ ಲಕ್ಷ್ಮಣ ಸವದಿ ಅವರ ಬೆಂಬಲಿಗರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾಗಿ ಕಾಂಗ್ರೆಸ್‌  ಕಾರ್ಯಕರ್ತ ರಾಜು ಜಮಖಂಡಿಕರ ಅಥಣಿ ಪೊಲೀಸ್‌ ಠಾಣೆಯಲ್ಲಿ ಮಂಗಳವಾರ ದೂರು ಸಲ್ಲಿಸಿದ್ದಾರೆ.

‘ಗಂಗಾಮತ ಸಮಾಜದ ಅಭಿವೃದ್ಧಿಗೆ ಕಾಮಗಾರಿಗಳನ್ನು ಹಮ್ಮಿಕೊಳ್ಳುವಂತೆ ಹಾಗೂ ಅನುದಾನ ನೀಡುವಂತೆ ಈ ಹಿಂದೆ ಹಲವು ಬಾರಿ ಕೋರಿಕೆ ಸಲ್ಲಿಸಿದ್ದರೂ ನೀಡಿಲ್ಲವೇಕೆ ಎಂದು ಸವದಿ ಅವರನ್ನು ಪ್ರಶ್ನಿಸಿದ್ದೆ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಅವರ ಕಾರು ಚಾಲಕ ಮುರುಗೇಶ ಮೋಟಗಿ, ಆಪ್ತ ಸಹಾಯಕ ವಿಜಯ ಮಂಗಸೂಳಿ ನನ್ನ ಮೇಲೆ ಹಲ್ಲೆ ಮಾಡಿದ್ದಾರೆ’ ಎಂದು ರಾಜು ಸುದ್ದಿಗಾರರಿಗೆ ತಿಳಿಸಿದರು.

‘ಸವದಿ, 15 ವರ್ಷಗಳಿಂದ ಈ ಕ್ಷೇತ್ರದ ಶಾಸಕರಾಗಿದ್ದಾರೆ. ಆದರೆ ನಮ್ಮ ಸಮಾಜದ ಅಭಿವೃದ್ಧಿಗಾಗಿ ಯಾವುದೇ ಕಾಮಗಾರಿ ಹಮ್ಮಿಕೊಳ್ಳುತ್ತಿಲ್ಲ. ಈಗ ಚುನಾವಣೆ ಸಮೀಪಿಸುತ್ತಿರುವುದರಿಂದ ಅಡಿಗಲ್ಲು ಹಾಕಲು ಬಂದಿದ್ದಾರೆ’ ಎಂದು ಅವರು ಈ ವೇಳೆ ಆರೋಪಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry