ಆಸ್ಪತ್ರೆ ನಿರ್ಮಾಣಕ್ಕೆ ಭೂಮಿಪೂಜೆ

7
ಕಡಿಮೆ ದರದಲ್ಲಿ ಉತ್ತಮ ಚಿಕಿತ್ಸಾ ಸೌಲಭ್ಯ: ಸಚಿವೆ ಮೋಹನಕುಮಾರಿ

ಆಸ್ಪತ್ರೆ ನಿರ್ಮಾಣಕ್ಕೆ ಭೂಮಿಪೂಜೆ

Published:
Updated:

ಚಾಮರಾಜನಗರ: ಇಲ್ಲಿನ ಯಡಪುರ ಗ್ರಾಮದ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಮಂಗಳವಾರ ಬೆಳಿಗ್ಗೆ 450 ಹಾಸಿಗೆ ಸಾಮರ್ಥ್ಯದ ಬೋಧನಾ ಆಸ್ಪತ್ರೆ ನಿರ್ಮಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಎಂ.ಸಿ.ಮೋಹನಕುಮಾರಿ ಭೂಮಿಪೂಜೆ ನೆರವೇರಿಸಿದರು.

ಜಿಲ್ಲೆಯು ಆರ್ಥಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಬಡವರಿದ್ದಾರೆ. ಅವರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಆಸ್ಪತ್ರೆ ಸ್ಥಾಪಿಸಲಾಗುತ್ತಿದ್ದು, ಇದರಿಂದ ಕಡಿಮೆ ದರದಲ್ಲಿ ಉತ್ತಮ ಚಿಕಿತ್ಸೆ ಎಲ್ಲರಿಗೂ ದೊರೆಯಲಿದೆ ಎಂದು ತಿಳಿಸಿದರು.

ಜಿಲ್ಲಾ ಕೇಂದ್ರದಲ್ಲಿ ಈಗಾಗಲೇ 42 ಎಕರೆ ಪ್ರದೇಶದಲ್ಲಿ ₹ 160ಕೋಟಿ ವೆಚ್ಚದಡಿ ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಿಸಲಾಗಿದ್ದು, ಇದಕ್ಕೆ ಪೂರಕವಾಗಿ ಪ್ರಸ್ತುತ ಆಸ್ಪತ್ರೆ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.

ಆಸ್ಪತ್ರೆಯನ್ನು ಬೆಂಗಳೂರಿನ ಸ್ಟಾರ್‌ ಆಫ್‌ ಬಿಲ್ಡರ್‌ ಖಾಸಗಿ ಕಂಪನಿಗೆ ಗುತ್ತಿಗೆ ನೀಡಲಾಗಿದೆ. ಟೆಂಡರ್‌ ಪ್ರಕ್ರಿಯೆ ಪೂರ್ಣಗೊಂಡಿದ್ದು, ನಿಗದಿತ ಸಮಯದಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದರು.

ಕಾರ್ಯಕ್ರಮದಲ್ಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ, ಜಿಲ್ಲಾ ಪಂಚಾಯಿತಿ ಪ್ರಭಾರ ಅಧ್ಯಕ್ಷ ಜೆ.ಯೋಗೇಶ್‌, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಪಿ.ಸದಾಶಿವಮೂರ್ತಿ, ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಕೆರೆಹಳ್ಳಿ ನವೀನ್‌, ಸದಸ್ಯರಾದ ಶಶಿಕಲಾ, ಚಂದ್ರಕಲಾ, ಕಾಡಾ ಅಧ್ಯಕ್ಷ ಎಚ್.ಎಸ್.ನಂಜಪ್ಪ, ಚೂಡಾ ಅಧ್ಯಕ್ಷ ಸುಹೇಲ್‌ ಆಲಿಖಾನ್, ಎಪಿಎಂಸಿ ಅಧ್ಯಕ್ಷ ಬಿ.ಕೆ.ರವಿಕುಮಾರ್, ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಉಮೇಶ್‌, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಎಚ್.ವಿ.ಚಂದ್ರು, ಉಪಾಧ್ಯಕ್ಷ ಪಿ.ಎನ್.ದಯಾನಿಧಿ, ಸದಸ್ಯೆ ನಾಗರಾಜಮ್ಮ, ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿ.ಲಕ್ಷ್ಮಿಕಾಂತ್, ವೈದ್ಯಕೀಯ ಕಾಲೇಜಿನ ಡೀನ್‌ ಡಾ.ಡಿ.ಎಚ್.ರಾಜೇಂದ್ರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ.ಕೆ.ಎಚ್.ಪ್ರಸಾದ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ರಘುರಾಮ್‌ ಸರ್ವೇಗಾರ್ ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry