ಮಹಾರಾಷ್ಟ್ರ ಸರ್ಕಾರಕ್ಕೆ ಸಿಎಜಿ ಚಾಟಿ

7

ಮಹಾರಾಷ್ಟ್ರ ಸರ್ಕಾರಕ್ಕೆ ಸಿಎಜಿ ಚಾಟಿ

Published:
Updated:

ಮುಂಬೈ: ಕ್ರೀಡೆಯ ಬೆಳವಣಿಗೆಗೆ ಅಗತ್ಯವಿರುವ ಮೂಲ ಸೌಕರ್ಯ ಒದಗಿಸಲು ವಿಫಲವಾಗಿರುವ ಮಹಾರಾಷ್ಟ್ರ ಸರ್ಕಾರವನ್ನು ಮಹಾಲೇಖಪಾಲ (ಸಿಎಜಿ) ಬುಧವಾರ ತರಾಟೆಗೆ ತೆಗೆದುಕೊಂಡಿದೆ.

‘ಕ್ರೀಡಾಂಗಣ ಮತ್ತು ಇತರ ವಸತಿ ನಿಲಯಗಳ ನವೀಕರಣಕ್ಕೆ ಸರ್ಕಾರ ಹೆಚ್ಚು ಅನುದಾನ ಬಿಡುಗಡೆ ಮಾಡುತ್ತಿಲ್ಲ. ರಾಜ್ಯದಲ್ಲಿರುವ ಕ್ರೀಡಾ ಅಕಾಡೆಮಿಗಳು ಸಮಸ್ಯೆಗಳ ಆಗರವಾಗಿವೆ. ಇದರಿಂದ ಕ್ರೀಡಾಪಟುಗಳ ಸಾಮರ್ಥ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಹೀಗಾಗಿ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ಗೆಲ್ಲುವವರ ಸಂಖ್ಯೆ ಕ್ಷೀಣಿಸುತ್ತಿದೆ’ ಎಂದು ವರದಿಯಲ್ಲಿ ತಿಳಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry