ಮಧುಕರ ಅಂಗೂರ್‌ ಅರ್ಜಿ ವಜಾ

7

ಮಧುಕರ ಅಂಗೂರ್‌ ಅರ್ಜಿ ವಜಾ

Published:
Updated:

ಬೆಂಗಳೂರು: ‘ಅಲಯನ್ಸ್‌ ವಿಶ್ವವಿದ್ಯಾಲಯದ ಪ್ರವೇಶಕ್ಕೆ ನಿರ್ಬಂಧ ಹೇರಿದ್ದ ನಗರ ಸಿವಿಲ್ ನ್ಯಾಯಾಲಯದ ಆದೇಶ ರದ್ದುಪಡಿಸಬೇಕು’ ಎಂದು ಕೋರಿ ವಿಶ್ವವಿದ್ಯಾಲಯದ ಮಾಜಿ ಕುಲಪತಿ ಮಧುಕರ್ ಅಂಗೂರ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಈ ಕುರಿತಂತೆ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ಅರ್ಜಿ ವಿಚಾರಣೆ ನಡೆಸಿತು.

ಆನೇಕಲ್‌ನಲ್ಲಿರುವ ಅಲಯನ್ಸ್‌ ವಿಶ್ವವಿದ್ಯಾಲಯದ ಪ್ರವೇಶ ನಿರ್ಬಂಧಿಸಿ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಕಳೆದ ವರ್ಷದ ಅಕ್ಟೋಬರ್ 21ರಂದು ಆದೇಶಿಸಿತ್ತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry