ನೀತಿ ಸಂಹಿತೆ; ಪಾಲಿಕೆ ಅಧಿಕಾರಿ, ಸಿಬ್ಬಂದಿ ಕಾರ್ಯಾಚರಣೆ

7
100ಕ್ಕೂ ಹೆಚ್ಚು ಕಡೆ ಹಾಕಿದ್ದ ಹೋಲ್ಡಿಂಗ್ಸ್ ತೆರವು, ಗಲ್ಲಿ ಗಲ್ಲಿ ಅಲೆದ ಅಧಿಕಾರಿಗಳು

ನೀತಿ ಸಂಹಿತೆ; ಪಾಲಿಕೆ ಅಧಿಕಾರಿ, ಸಿಬ್ಬಂದಿ ಕಾರ್ಯಾಚರಣೆ

Published:
Updated:
ನೀತಿ ಸಂಹಿತೆ; ಪಾಲಿಕೆ ಅಧಿಕಾರಿ, ಸಿಬ್ಬಂದಿ ಕಾರ್ಯಾಚರಣೆ

ತುಮಕೂರು: ಚುನಾವಣೆ ನೀತಿ ಸಂಹಿತೆ ಜಾರಿಯಾಗಿದ್ದರಿಂದ ಮಂಗಳವಾರ ದಿನವೇ ಜಿಲ್ಲೆಯಲ್ಲಿ ರಾಜಕಾರಣಿಗಳು, ರಾಜಕೀಯ ಪಕ್ಷಗಳ ಬ್ಯಾನರ್, ಬಂಟಿಂಗ್ಸ್‌ಗಳನ್ನು ತೆರವು ಗೊಳಿಸುವ ಕಾರ್ಯ ಬುಧವಾರವೂ ಮುಂದುವರಿಯಿತು.

ಮಹಾನಗರ ಪಾಲಿಕೆ ಆಯುಕ್ತರ ನೇತೃತ್ವದಲ್ಲಿ ಪಾಲಿಕೆಯ 11 ಆರೋಗ್ಯ ನಿರೀಕ್ಷಕರು, ಆರೋಗ್ಯಾಧಿಕಾರಿ, ಪೌರ ಕಾರ್ಮಿಕರು ಸೇರಿದಂತೆ 30ಕ್ಕೂ ಹೆಚ್ಚು ಅಧಿಕಾರಿ, ಸಿಬ್ಬಂದಿ ನಗರದ ನಾಲ್ಕೂ ದಿಕ್ಕಿನಲ್ಲಿ ತೆರವು ಕಾರ್ಯಾಚರಣೆ ಕೈಗೊಂಡರು.

ನಗರದ 35 ವಾರ್ಡ್‌ಗಳಲ್ಲೂ ಸಂಚರಿಸಿ ಹುಡುಕಿ ಹುಡುಕಿ ಫ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್ ತೆರವುಗೊಳಿಸಲಾಗುತ್ತಿದೆ. ಮಂಗಳವಾರ ನಗರದಲ್ಲಿ 1200ಕ್ಕೂ ಹೆಚ್ಚು ಫ್ಲೆಕ್ಸ್, ಬಂಟಿಂಗ್ಸ್ ತೆರವುಗೊಳಿಸಲಾಗಿತ್ತು. ಬುಧವಾರ ಫೆಕ್ಸ್, ಬಂಟಿಂಗ್ಸ್ ಸಂಖ್ಯೆ ಕಡಿಮೆ ಇತ್ತು. ಆದರೆ, 100ಕ್ಕೂ ಹೆಚ್ಚು ಕಡೆ ಹಾಕಿದ್ದ ಹೋಲ್ಡಿಂಗ್ಸ್ ಗಳನ್ನು ತೆರವುಗೊಳಿಸಲಾಯಿತು ಎಂದು ಮಹಾನಗರ ಪಾಲಿಕೆ ಆಯುಕ್ತ ಮಂಜುನಾಥಸ್ವಾಮಿ ‘ಪ್ರಜಾವಾಣಿ’ಗೆ ತಿಳಿಸಿದರು.

ಚುನಾವಣಾ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲಾಗುತ್ತಿದೆ. ನಗರದ ಯಾವುದೇ ಮೂಲೆಯಲ್ಲಿ ಫ್ಲೆಕ್ಸ್, ಬಂಟಿಂಗ್ಸ್, ಹೋಲ್ಡಿಂಗ್ಸ್ ಕಂಡು ಬಂದರೂ ಮಹಾನಗರ ಪಾಲಿಕೆಗೆ ಸಾರ್ವಜನಿಕರು ಮಾಹಿತಿ ನೀಡಿದರೆ ಸಾಕು ಅರ್ಧ ಗಂಟೆಯೊಳಗೆ ತೆರವುಗೊಳಿಸಲಾಗುವುದು ಎಂದು ಹೇಳಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry