ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹ 3.5 ಕೋಟಿ ವೆಚ್ಚದ ಕಟ್ಟಡಕ್ಕೆ ಗುದ್ದಲಿಪೂಜೆ

₹ 3.5 ಕೋಟಿ ವೆಚ್ಚದ ಕಟ್ಟಡ ಕಾಮಗಾರಿಗೆ ಚಾಲನೆ
Last Updated 29 ಮಾರ್ಚ್ 2018, 6:26 IST
ಅಕ್ಷರ ಗಾತ್ರ

ಯಲ್ಲಾಪುರ: ‘ಕಟ್ಟಡದ ಭವಿಷ್ಯ ಗುಣಮಟ್ಟದ ಮೇಲೆ ನಿಂತಿರುವ ಕಾರಣ ಗುತ್ತಿಗೆದಾರರು ಉತ್ತಮ ಗುಣಮಟ್ಟದ ಕೆಲಸ ಮಾಡಲಿ’ ಎಂದು ಶಾಸಕ ಶಿವರಾಮ ಹೆಬ್ಬಾರ ಹೇಳಿದರು.

₹ 3.5 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಪಟ್ಟಣ ಪಂಚಾಯ್ತಿಯ ನೂತನ ಕಟ್ಟಡಕ್ಕೆ ಇತ್ತೀಚೆಗೆ ಗುದ್ದಲಿಪೂಜೆ ನೆರವೇರಿಸಿ, ಅವರು ಮಾತನಾಡಿದರು. ಪಟ್ಟಣ ಪಂಚಾಯ್ತಿ ನೂತನ ಕಟ್ಟಡಕ್ಕೆ ಹಣ ಮಂಜೂರು ಆಗಿತ್ತು, ಈಗ ಹೆಚ್ಚುವರಿಯಾಗಿ ಎರಡನೇ ಮಹಡಿಗೂ ಹಣ ಬಿಡುಗಡೆಯಾಗಿದೆ. ಜಿಲ್ಲೆಯ ಯಾವುದೇ ಸ್ಥಳೀಯ ಸಂಸ್ಥೆಗೂ ಸಿಗದಷ್ಟು ಹಣ ಯಲ್ಲಾಪುರ ಪಟ್ಟಣ ಪಂಚಾಯ್ತಿಗೆ ಸಿಕ್ಕಿರುವುದು ಖುಷಿ ತಂದಿದೆ. ಇಲ್ಲಗಳ ಪುರವಾಗಿದ್ದ ಯಲ್ಲಾಪುರ ಈಗ ಎಲ್ಲಗಳ ಪುರವಾಗಿ ಮಾರ್ಪಾಡಾಗುತ್ತಿದೆ ಎಂದರು.

ಶಾಸಕರು ಇದೇ ಸಂದರ್ಭದಲ್ಲಿ ಇಂದಿರಾ ಕ್ಯಾಂಟೀನ್‌ ಕಟ್ಟಡದ ಗುದ್ದಲಿಪೂಜೆ ನೆರವೇರಿಸಿದರು. ಹಸಿವು ಮುಕ್ತ ಕರ್ನಾಟಕ ರೂಪಿಸುವ ನಿಟ್ಟಿನಲ್ಲಿ ರಿಯಾಯತಿ ದರದಲ್ಲಿ ಊಟ- ಉಪಹಾರ ನೀಡುವ ಇಂದಿರಾ ಕ್ಯಾಂಟೀನ್ ಯೋಜನೆ ಪ್ರಾರಂಭಿಸಲಾಗಿದೆ. ಬಡ ಜನರಿಗೆ ಇದರಿಂದ ಉಪಯೋಗವಾಗಲಿದೆ ಎಂದರು. ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಭವ್ಯಾ ಶೆಟ್ಟಿ, ಪಟ್ಟಣ ಪಂಚಾಯ್ತಿ ಅಧ್ಯಕ್ಷ ಶರೀಷ ಪ್ರಭು, ಮಾಜಿ ಅಧ್ಯಕ್ಷ ಎಂ.ಡಿ.ಮುಲ್ಲಾ, ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ನಿರ್ದೇಶಕ ವಿಜಯ್ ಮಿರಾಶಿ, ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಮಹೇಂದ್ರ ತಿಮ್ಮಾನಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT