ಜೆಡಿಎಸ್ ಮುಖಂಡರು ಕಾಂಗ್ರೆಸ್‌ಗೆ

7
ಹಗರಿಬೊಮ್ಮನಹಳ್ಳಿ: ಆರಂಭಗೊಂಡ ಪಕ್ಷಾಂತರ ಪರ್ವ

ಜೆಡಿಎಸ್ ಮುಖಂಡರು ಕಾಂಗ್ರೆಸ್‌ಗೆ

Published:
Updated:

ಹಗರಿಬೊಮ್ಮನಹಳ್ಳಿ: ಮಾಜಿ ಶಾಸಕ ಎಸ್‌. ಭೀಮಾನಾಯ್ಕ ಅವರ ಬೆಂಬಲಿಗರಾದ ಅಕ್ಕಿ ತೋಟೇಶ್‌, ಕನ್ನಿಹಳ್ಳಿ ಚಂದ್ರಶೇಖರ್‌ ಹಾಗೂ ಚಿಂತ್ರಪಳ್ಳಿ ದೇವೇಂದ್ರಪ್ಪ ಅವರು ಪಕ್ಷದ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಸಮ್ಮುಖದಲ್ಲಿ ಮಂಗಳವಾರ ಬೆಂಗಳೂರಿನ ಪ್ರದೇಶ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ಜೆಡಿಎಸ್ ಪಕ್ಷ ತೊರೆದು ಪಕ್ಷದ ಅಧ್ಯಕ್ಷ ರಾಹುಲ್‌ಗಾಂಧಿ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರಿದ ಬೆನ್ನಲ್ಲೇ, ಈ ಬೆಳವಣಿಗೆ ನಡೆದಿದೆ.

ಇತ್ತೀಚೆಗೆ ತಂಬ್ರಹಳ್ಳಿಯಲ್ಲಿ ನಡೆದ ಕಾರ್ಯದಕ್ರಮದಲ್ಲಿ ಪಿಎಲ್‌ಡಿ ಬ್ಯಾಂಕ್ ನಿರ್ದೇಶಕ ಬಣಕಾರ ತೋಟಪ್ಪ, ಗೌರಜ್ಜನವರ ಬಸವರಾಜಪ್ಪ ಇತರರು ಭೀಮಾನಾಯ್ಕ ಅವರ ಸಖ್ಯ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರು.

ಚುನಾವಣೆ ಘೋಷಣೆ ಯಾಗಿರುವುದರಿಂದ ಪಕ್ಷಾಂತರ ಪರ್ವ ಇನ್ನೂ ಜೋರಾಗಲಿದೆ. ಕಾಂಗ್ರೆಸ್ ಪಕ್ಷದ ಪ್ರಮುಖ ಮುಖಂಡರು ಬಿಜೆಪಿ ಪಕ್ಷಕ್ಕೆ, ಬಿಜೆಪಿ ಪಕ್ಷದ ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರುವ ಚಿಂತನೆ ನಡೆಸಿದ್ದಾರೆ ಎಂದು ಹೆಸರು ಹೇಳಲು ಬಯಸದ ಕಾಂಗ್ರೆಸ್ ಮುಖಂಡರೊಬ್ಬರು ತಿಳಿಸಿದರು.

ಕಾಂಗ್ರೆಸ್‌, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಅಸ್ಪೃಶ್ಯ ದಲಿತ ಜನಾಂದವರಿಗೆ ಟಿಕೆಟ್‌ ನೀಡಿದಿದ್ದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಮುಖಂಡರೊಬ್ಬರು ಪ್ರಜಾವಾಣಿಗೆ ತಿಳಿಸಿದರು.ಒಟ್ಟಾರೆಯಾಗಿ ವಿಧಾನಸಭಾ ಕ್ಷೇತ್ರದಲ್ಲಿ ಭಾರಿ ರಾಜಕೀಯ ಧೃವೀಕರಣವಾಗಲಿದೆ.

                                                                                                     –ಜೆ.ತಿಮ್ಮಪ್ಪ ಚಿಕ್ಕಜಾಜೂರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry