ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣೆ: ಆಯುಧ ಠೇವಣಿಗೆ ಆದೇಶ

Last Updated 29 ಮಾರ್ಚ್ 2018, 7:21 IST
ಅಕ್ಷರ ಗಾತ್ರ

ಮಂಗಳೂರು: ಜಿಲ್ಲೆಯ ಬೆಳೆ ರಕ್ಷಣೆಗಾಗಿ ಮತ್ತು ಆತ್ಮರಕ್ಷಣೆಗಾಗಿ ಮಂಜೂರು ಮಾಡಲಾಗಿರುವ ಎಲ್ಲ ಆಯುಧ ಪರವಾನ ಗಿಗಳನ್ನು ಮೇ 22ರವರೆಗೆ ಅಮಾನತಿನಲ್ಲಿರಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯನ್ನು ಹೊರತುಪಡಿಸಿ, ಉಳಿ ದಂತೆ ಜಿಲ್ಲೆಯ ಬೆಳೆ ರಕ್ಷಣೆಗಾಗಿ ಶಸ್ತ್ರಾಸ್ತ್ರ ಪರವಾನಗಿದಾರರು, ತಮ್ಮ ಶಸ್ತ್ರಾಸ್ತ್ರ ಏಪ್ರಿಲ್ 20 ರೊಳಗೆ ನಮೂನೆ ನಂ 8ರ ಪರವಾನಗಿ ಹೊಂದಿರುವ ಅಧಿಕೃತ ಕೋವಿ ಮದ್ದು ಗುಂಡು ವ್ಯಾಪಾರಿಗಳಲ್ಲಿ ಠೇವಣಿ ಇಡಬೇಕು. ಜಿಲ್ಲೆಯ ಆತ್ಮರಕ್ಷಣೆಗಾಗಿ ಶಸ್ತ್ರಾಸ್ತ್ರ ಪರವಾನಗಿ ಹೊಂದಿದವರು ತಮ್ಮ ಪಿಸ್ತೂಲ್‌ಗಳನ್ನು ಹತ್ತಿರದ ಪೊಲೀಸ್ ಠಾಣೆಯಲ್ಲಿ ಹಾಗೂ ಇತರ ಶಸ್ತ್ರಾಸ್ತ್ರಗಳನ್ನು ಪರವಾನಗಿ ಹೊಂದಿರುವ ಹತ್ತಿರದ ಅಧಿಕೃತ ಕೋವಿ ಮದ್ದುಗುಂಡು ವ್ಯಾಪಾರಿಗಳಲ್ಲಿ ಏಪ್ರಿಲ್ 20ರೊಳಗೆ ಠೇವಣಿ ಇಡಬೇಕು.

ಆಕ್ಷೇಪ ಇದ್ದಲ್ಲಿ, ಸ್ವರಕ್ಷಣೆಗೆ ಆಯುಧದ ತೀರಾ ಅವಶ್ಯಕತೆ ಇದೇ ಎಂದಾದಲ್ಲಿ ಈ ಆದೇಶ ಹೊರಡಿಸಿದ ಒಂದು ವಾರದೊಳಗೆ ಸಂಬಂಧಪಟ್ಟ ಪೂರಕ ದಾಖಲೆಗಳೊಂದಿಗೆ ನಗರ ವ್ಯಾಪ್ತಿಯನ್ನು ಬಿಟ್ಟು ಉಳಿದೆಡೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ಅಹವಾಲು ಸಲ್ಲಿಸಬೇಕು. ಅವಧಿ ಮುಗಿದ ತಕ್ಷಣ ಆಯುಧ ಠೇವಣಿ ಪಡೆದ ಅಧಿಕಾರಿಗಳು/ಡೀಲರ್‌ಗಳು, ಆಯುಧ ಠೇವಣಿದಾರರಿಗೆ ಹಿಂತಿರುಗಿಸಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT