ಕಾಂಗ್ರೆಸ್‌ಗೆ ಆರಂಭಿಕ ಆಘಾತ: ಬಿಜೆಪಿ ಸೇರಲಿದ್ದಾರೆ ಮಾಲೀಕಯ್ಯ ಗುತ್ತೇದಾರ!

7

ಕಾಂಗ್ರೆಸ್‌ಗೆ ಆರಂಭಿಕ ಆಘಾತ: ಬಿಜೆಪಿ ಸೇರಲಿದ್ದಾರೆ ಮಾಲೀಕಯ್ಯ ಗುತ್ತೇದಾರ!

Published:
Updated:
ಕಾಂಗ್ರೆಸ್‌ಗೆ ಆರಂಭಿಕ ಆಘಾತ: ಬಿಜೆಪಿ ಸೇರಲಿದ್ದಾರೆ ಮಾಲೀಕಯ್ಯ ಗುತ್ತೇದಾರ!

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಕಾವು ಏರುತ್ತಿದ್ದು, ಅಫಜಲಪುರ ಕ್ಷೇತ್ರದ ಆರು ಬಾರಿಯ ಶಾಸಕ ಮಾಲೀಕಯ್ಯ ಗುತ್ತೇದಾರ ಅವರು ಕಾಂಗ್ರೆಸ್‌ ಹಾಗೂ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲು ನಿರ್ಧರಿಸಿದ್ದಾರೆ. ಇದರಿಂದಾಗಿ ರಾಜ್ಯ ಕಾಂಗ್ರೆಸ್‌ಗೆ ಆರಂಭಿಕ ಆಘಾತವಾದಂತಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವ ಗುತ್ತೇದಾರ, ಮೈಸೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಅಮಿತ್‌ ಶಾ ನೇತೃತ್ವದಲ್ಲಿ ಬಿಜೆಪಿಗೆ ಸೇರುವುದಾಗಿ ಹೇಳಿದ್ದಾರೆ.

ಹೈದರಾಬಾದ್‌ ಕರ್ನಾಟಕ ಭಾಗದ ಪ್ರಭಾವಿ ರಾಜಕಾರಣಿ ಪಕ್ಷ ತೊರೆಯುವುದಾಗಿ ಹೇಳಿರುವುದು ಕಾಂಗ್ರೆಸ್‌ಗೆ ದೊಡ್ಡ ಹೊಡೆತ ಎಂದು ವಿಶ್ಲೇಷಿಸಲಾಗುತ್ತಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry