ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರಿನಲ್ಲಿ ಚುನಾವಣಾ ಸಹಾಯವಾಣಿ ಕೇಂದ್ರ ಆರಂಭ

Last Updated 29 ಮಾರ್ಚ್ 2018, 10:17 IST
ಅಕ್ಷರ ಗಾತ್ರ

ಬೆಂಗಳೂರು: ಚುನಾವಣೆಗೆ ತಯಾರಿ ನಡೆಸಿರುವ ಬೆಂಗಳೂರು ನಗರ ಜಿಲ್ಲಾಡಳಿತವು ಚುನಾವಣೆಗೆ ಸಂಬಂಧಿಸಿದ ಎಲ್ಲ ಮಾಹಿತಿ ಪಡೆಯಲು ಹಾಗೂ ದೂರುಗಳನ್ನು ಸಲ್ಲಿಸಲು ಸಹಾಯವಾಣಿ ಕೇಂದ್ರ ಆರಂಭಿಸಿದೆ.

ಜಿಲ್ಲಾಧಿಕಾರಿ ದಯಾನಂದ್ ಹಾಗೂ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ನಗರದಲ್ಲಿ ಸಂಜೆಯ ವೇಳೆಗೆ ಸಹಾಯವಾಣಿ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ.

ಈ ಕೇಂದ್ರದಲ್ಲಿ ಆನೇಕಲ್, ಬೆಂಗಳೂರು ದಕ್ಷಿಣ, ಮಹದೇವಪುರ, ಬ್ಯಾಟರಾಯನಪುರ, ಯಲಹಂಕ, ದಾಸರಹಳ್ಳಿ ಹಾಗೂ ಯಶವಂತಪುರ ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಪಟ್ಟ ಚುನಾವಣಾ ದೂರುಗಳು ಹಾಗೂ ವಿಚಾರಣೆಯನ್ನು ಮಾಡಬಹುದಾಗಿದೆ.

ಸಹಾಯವಾಣಿ ಸಂಖ್ಯೆ: 18004250138. ಮುಂದಿನ 24 ಗಂಟೆಗಳಲ್ಲಿ ಈ ಸಂಖ್ಯೆಯು ಕಾರ್ಯನಿರ್ವಹಿಸಲಿದೆ ಎಂದು ಚುನಾವಣಾ ಅಧಿಕಾರಿಗಳು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT