ಕೋಟೆ ವೀರಭದ್ರೇಶ್ವರ ರಥೋತ್ಸವ

7

ಕೋಟೆ ವೀರಭದ್ರೇಶ್ವರ ರಥೋತ್ಸವ

Published:
Updated:
ಕೋಟೆ ವೀರಭದ್ರೇಶ್ವರ ರಥೋತ್ಸವ

ಲಕ್ಕುಂಡಿ (ಗದಗ ತಾ.): ಗ್ರಾಮದ 40ನೇ ವರ್ಷದ ಕೋಟೆ ವೀರಭದ್ರೇಶ್ವರ ರಥೋತ್ಸವ ಬುಧವಾರ ಸಂಜೆ ಸಂಭ್ರಮದಿಂದ ನಡೆಯಿತು.

ಕಪ್ಪತಗುಡ್ಡದ ನಂದಿವೇರಿ ಮಠದ ಶಿವಕುಮಾರ ಸ್ವಾಮೀಜಿ ರಥೋತ್ಸವಕ್ಕೆ ಚಾಲನೆ ನೀಡಿದರು. ಭಕ್ತರು ‘ವೀರಭದ್ರೇಶ್ವರ ಮಹಾರಾಜಕೀ ಜೈ, ಹರ ಹರ ಮಹಾದೇವ’ ಎಂಬ ಘೋಷಣೆಗಳನ್ನು ಕೂಗುವ ಮೂಲಕ ರಥ ಎಳೆದರು.ತೇರಿಗೆ ಉತ್ತತ್ತಿ, ಹಣ್ಣು, ಕಾಯಿ ಎಸೆದು ಹರಕೆ ತೀರಿಸಿದರು.

ನಂದಿಕೋಲ ಮೇಳ, ಜಾಂಜ್ ಮೇಳ, ಡೊಳ್ಳು ಕುಣಿತ ಸೇರಿ ಜಾನಪದ ಕಲಾ ತಂಡಗಳು ರಥೋತ್ಸವಕ್ಕೆ ಕಳೆ ತಂದವು. ಜಾತ್ರೆಯ ಅಂಗವಾಗಿ ಬೆಳಿಗ್ಗೆ ವೀರಭದ್ರ ದೇವರಿಗೆ ರುದ್ರಾಭಿಷೇಕ ಹಾಗೂ ವಿಶೇಷ ಪೂಜಾ ಕೈಂಕರ್ಯ ನೆರವೇರಿಸಲಾಯಿತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry