ಸನ್‌ರೈಸರ್ಸ್‌ ತಂಡಕ್ಕೆ ವಿಲಿಯಮ್ಸನ್‌ ನಾಯಕ

7

ಸನ್‌ರೈಸರ್ಸ್‌ ತಂಡಕ್ಕೆ ವಿಲಿಯಮ್ಸನ್‌ ನಾಯಕ

Published:
Updated:
ಸನ್‌ರೈಸರ್ಸ್‌ ತಂಡಕ್ಕೆ ವಿಲಿಯಮ್ಸನ್‌ ನಾಯಕ

ನವದೆಹಲಿ: ನ್ಯೂಜಿಲೆಂಡ್‌ ಕ್ರಿಕೆಟ್‌ ತಂಡದ ನಾಯಕ ಕೇನ್‌ ವಿಲಿಯಮ್ಸನ್‌ ಅವರು ಮುಂದಿನ ತಿಂಗಳು ನಡೆಯುವ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌) ಕ್ರಿಕೆಟ್‌ ಟೂರ್ನಿಯಲ್ಲಿ ಸನ್‌ರೈಸರ್ಸ್‌ ಹೈದರಾಬಾದ್‌ ತಂಡವನ್ನು ಮುನ್ನಡೆಸಲಿದ್ದಾರೆ.

ಸನ್‌ರೈಸರ್ಸ್‌ ಫ್ರಾಂಚೈಸ್‌ ಗುರುವಾರ ವಿಲಿಯಮ್ಸನ್‌ ಅವರನ್ನು ನಾಯಕನನ್ನಾಗಿ ನೇಮಿಸಿದೆ.

ಹಿಂದಿನ ಎರಡು ಆವೃತ್ತಿಗಳಲ್ಲಿ ಆಸ್ಟ್ರೇಲಿಯಾದ ಡೇವಿಡ್‌ ವಾರ್ನರ್‌ ತಂಡದ ಸಾರಥ್ಯ ವಹಿಸಿದ್ದರು. ಚೆಂಡು ವಿರೂಪಗೊಳಿಸಿದ ಪ್ರಕರಣದಲ್ಲಿ ಅವರ ಮೇಲೆ ಕ್ರಿಕೆಟ್‌ ಆಸ್ಟ್ರೇಲಿಯಾ (ಸಿಎ) ಮತ್ತು ಭಾರತ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ಒಂದು ವರ್ಷ ನಿಷೇಧ ಹೇರಿದೆ. ಹೀಗಾಗಿ ವಾರ್ನರ್‌ ಈ ಬಾರಿ ಐಪಿಎಲ್‌ನಲ್ಲಿ ಆಡುತ್ತಿಲ್ಲ.

ಸನ್‌ರೈಸರ್ಸ್‌ ತಂಡ ಈ ಬಾರಿಯ ಆಟಗಾರರ ಹರಾಜಿನಲ್ಲಿ ₹ 3 ಕೋಟಿ ನೀಡಿ ವಿಲಿಯಮ್ಸನ್‌ ಅವರನ್ನು ಖರೀದಿಸಿತ್ತು.

‘ಈ ಸಲದ ಐಪಿಎಲ್‌ನಲ್ಲಿ ಸನ್‌ರೈಸರ್ಸ್‌ ತಂಡವನ್ನು ಮುನ್ನಡೆಸುವ ಅವಕಾಶ ಸಿಕ್ಕಿರುವುದಕ್ಕೆ ಅತೀವ ಖುಷಿಯಾಗಿದೆ. ನನ್ನ ಮೇಲೆ ನಂಬಿಕೆ ಇಟ್ಟು ಈ ಜವಾಬ್ದಾರಿ ವಹಿಸಿರುವ ಆಡಳಿತ ಮಂಡಳಿಗೆ ಕೃತಜ್ಞನಾಗಿದ್ದೇನೆ. ತಂಡದಲ್ಲಿ ಪ್ರತಿಭಾನ್ವಿತ ಆಟಗಾರರಿದ್ದು ಈ ಬಾರಿ ಪ್ರಶಸ್ತಿ ಗೆಲ್ಲಲು ಶ್ರಮಿಸುತ್ತೇವೆ’ ಎಂದು ವಿಲಿಯಮ್ಸನ್‌ ಸಂತಸ ವ್ಯಕ್ತಪಡಿಸಿದ್ದಾರೆ.

ಸನ್‌ರೈಸರ್ಸ್‌ ತಂಡ ಏಪ್ರಿಲ್‌ 9ರಂದು ನಡೆಯುವ ತನ್ನ ಮೊದಲ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್‌ ವಿರುದ್ಧ ಸೆಣಸಲಿದೆ. 2016ರ ಐಪಿಎಲ್‌ನಲ್ಲಿ ತಂಡ ಪ್ರಶಸ್ತಿ ಗೆದ್ದಿತ್ತು. ಆಗ ವಾರ್ನರ್‌ ನಾಯಕರಾಗಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry