ಬೊಮ್ಮಾಯಿಗೆ ಬಂಡಾಯದ ಬಿಸಿ

7

ಬೊಮ್ಮಾಯಿಗೆ ಬಂಡಾಯದ ಬಿಸಿ

Published:
Updated:

ಹಾವೇರಿ: ‘ಶಿಗ್ಗಾವಿ– ಸವಣೂರು ಕ್ಷೇತ್ರದಲ್ಲಿ ಹಾಲಿ ಶಾಸಕ ಬಸವರಾಜ ಬೊಮ್ಮಾಯಿ ಅವರಿಗೆ ಬಿಜೆಪಿ ಟಿಕೆಟ್‌ ನೀಡಬಾರದು. ಅವರ ಬದಲಿಗೆ, ಸ್ಥಳೀಯರಿಗೇ ಟಿಕೆಟ್ ನೀಡಬೇಕು’ ಎಂದು ವಿಧಾನ ಪರಿಷತ್‌ ಸದಸ್ಯ ಸೋಮಣ್ಣ ಬೇವಿನಮರದ, ಮಾಜಿ ಶಾಸಕ ರಾಜಶೇಖರ ಸಿಂಧೂರ ಆಗ್ರಹಿಸಿದರು.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘2008ರಲ್ಲಿ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡಬೇಕು ಎಂಬ ಏಕೈಕ ಕಾರಣಕ್ಕೆ ಬೊಮ್ಮಾಯಿ ಅವರ ಸ್ಪರ್ಧೆಗೆ ನಾವೆಲ್ಲರೂ ಒಪ್ಪಿದ್ದೆವು. ಕೊಟ್ಟ ಮಾತಿನಂತೆ ಸತತ ಎರಡು ಬಾರಿ ಗೆಲ್ಲಿಸಿದ್ದೇವೆ. ಎರಡು ಅವಧಿಯ (2008 ಮತ್ತು 2013) ಬಳಿಕ ಕ್ಷೇತ್ರ ಬಿಟ್ಟು ಕೊಡುವ ಭರವಸೆಯನ್ನು ಅವರು ಕೊಟ್ಟಿದ್ದರು’ ಎಂದು ಹೇಳಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry