ಜೂನ್‌ 6ಕ್ಕೆ ಅಮೆರಿಕ ವೀಸಾ ದಿನ

7

ಜೂನ್‌ 6ಕ್ಕೆ ಅಮೆರಿಕ ವೀಸಾ ದಿನ

Published:
Updated:

ನವದೆಹಲಿ: ಅಮೆರಿಕದ ವೀಸಾ ದಿನವನ್ನು ಜೂನ್‌ 6ರಂದು ಆಚರಿಸಲು ನಿರ್ಧರಿಸಲಾಗಿದೆ.

ವೀಸಾ ದಿನದಂದು ಪ್ರಮುಖವಾಗಿ ಅಮೆರಿಕದಲ್ಲಿ ಉನ್ನತ ಶಿಕ್ಷಣ ಪಡೆಯಲು ಇಚ್ಛಿಸಿರುವ ವಿದ್ಯಾರ್ಥಿಗಳ ವೀಸಾ ಅರ್ಜಿಗಳ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು.

ದೆಹಲಿಯಲ್ಲಿನ ಅಮೆರಿಕ ರಾಯಭಾರಿ ಕಚೇರಿ ಹಾಗೂ ಚೆನ್ನೈ, ಹೈದರಾಬಾದ್‌, ಕೋಲ್ಕತ್ತ ಮತ್ತು ಮುಂಬೈನಲ್ಲಿರುವ ಕಾನ್ಸಲೇಟ್‌ ಕಚೇರಿಗಳಲ್ಲಿ ಇದಕ್ಕಾಗಿಯೇ ವಿದ್ಯಾರ್ಥಿಗಳಿಗೂ ಮುಕ್ತ ಅವಕಾಶ ಕಲ್ಪಿಸಲಾಗಿದೆ ಎಂದು ಅಮೆರಿಕ ಕಾನ್ಸಲ್‌ ಜನರಲ್‌ ಜಾರ್ಜ್‌ ಎಚ್‌.ಹಾಗಮನ್‌ ತಿಳಿಸಿದ್ದಾರೆ.

ಅಮೆರಿಕದಲ್ಲಿ ಉನ್ನತ ಶಿಕ್ಷಣ ಪಡೆಯಲು ಬಯಸುವ ವಿದ್ಯಾರ್ಥಿಗಳಿಗೆ ನಡೆಯುವ ವೀಸಾ ಸಂದರ್ಶನದಲ್ಲಿ ಯಶಸ್ವಿಯಾಗಲು ಯಾವುದೇ ವಾಮ ಮಾರ್ಗಗಳು ಇಲ್ಲ. ಹೀಗಾಗಿ, ವಿದ್ಯಾರ್ಥಿಗಳು ಅಧಿಕಾರಿಗಳು ಕೇಳುವ ಪ್ರಶ್ನೆಗೆ ಸಮರ್ಪಕವಾಗಿ ಉತ್ತರಗಳನ್ನು ನೀಡಿದರೆ ಸಾಕು ಎಂದು ಸಲಹೆ ನೀಡಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry