ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಚಿಂತಾಮಣಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಒತ್ತು’

Last Updated 30 ಮಾರ್ಚ್ 2018, 7:15 IST
ಅಕ್ಷರ ಗಾತ್ರ

ಚಿಂತಾಮಣಿ: ಕ್ಷೇತ್ರದಲ್ಲಿ 5 ವರ್ಷಗಳಿಂದ ಆಗಿರುವ ಅಭಿವೃದ್ಧಿ ಹಾಗೂ ನನ್ನ ನಡವಳಿಕೆ ಮೆಚ್ಚಿ ಅನೇಕ ಮುಖಂಡರು ಮತ್ತು ಕಾರ್ಯಕರ್ತರು ಜೆಡಿಎಸ್‌ ಸೇರ್ಪಡೆಯಾಗುತ್ತಿದ್ದಾರೆ. ಅವರ ವಿಶ್ವಾಸಕ್ಕೆ ಧಕ್ಕೆ ಬರದಂತೆ ಕ್ಷೇತ್ರದ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು ಶಾಸಕ ಎಂ.ಕೃಷ್ಣಾರೆಡ್ಡಿ ತಿಳಿಸಿದರು.

ತಾಲ್ಲೂಕಿನ ಕಸಬಾ ಹೋಬಳಿಯ ಆನೂರಿನಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಕರ್ತರ ಸಮಾವೇಶ ಹಾಗೂ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.‘ಸಮಾಜಸೇವೆಯಲ್ಲಿ 5 ವರ್ಷ ಹಾಗೂ ಶಾಸಕನಾಗಿ 5 ವರ್ಷ ತಾಲ್ಲೂಕಿನಲ್ಲಿ ಹಲವಾರು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ. 5 ವರ್ಷಗಳಲ್ಲಿ ತಾಲ್ಲೂಕಿನಲ್ಲಿ ಯಾವುದೇ ಗಲಾಟೆ, ಗಲಭೆಗಳಿಗೆ ಆಸ್ಪದ ನೀಡದೆ ಪಕ್ಷಾತೀತವಾಗಿ ನಡೆದುಕೊಂಡಿದ್ದೇನೆ’ ಎಂದು ತಿಳಿಸಿದರು.‘ಸಾಮಾಜಿಕ ನ್ಯಾಯ ಒದಗಿಸುವ ಸಲುವಾಗಿ ಸರ್ಕಾರದ ಅನುದಾನವನ್ನು ಎಲ್ಲ ಗ್ರಾಮಗಳಿಗೂ ಸಮಾನವಾಗಿ ವಿತರಣೆ ಮಾಡಿ ಕುಡಿಯುವ ನೀರು, ರಸ್ತೆ, ಚರಂಡಿ ಕಾಮಗಾರಿಗಳನ್ನು ಮಾಡಿಸಿದ್ದೇನೆ’ಎಂದು ಹೇಳಿದರು.

ಮುಖಂಡ ಡಾ.ಎಂ.ಸಿ. ಸುಧಾಕರ್‌ ಬಣದ ಗ್ರಾಮ ಪಂಚಾಯಿತಿ ಸದಸ್ಯೆ ಲಕ್ಷ್ಮೀದೇವಮ್ಮ, ಮೆಡಿಕಲ್‌ ಶ್ರೀನಿವಾಸ್‌, ತಿಮ್ಮಣ್ಣ, ಮಂಜು, ಗಿರೀಶ್‌, ನಾಗ ಭೂಷಣ್‌, ನಾರಾಯಣಸ್ವಾಮಿ ಜೆಡಿಎಸ್‌ ಸೇರ್ಪಡೆಯಾದರು. ಬಿಎಸ್ಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಪಿ.ವಿ.ನಾಗಪ್ಪ, ತಾಲ್ಲೂಕು ಘಟಕದ ಅಧ್ಯಕ್ಷ ಮಂಜುನಾಥ್‌, ಮುಖಂಡರಾದ ಆನೂರು ಶ್ರೀನಿವಾಸ್‌, ಹಾದಿಗೆರೆ ನಾಗೇಶ್‌, ವೆಂಕಟರೆಡ್ಡಿ, ನಾರಾಯಣಸ್ವಾಮಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT