ಕೊಲೆಗಡುಕರು ಪಾತಾಳದಲ್ಲಿದ್ದರೂ ಬಿಡೆವು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ

7

ಕೊಲೆಗಡುಕರು ಪಾತಾಳದಲ್ಲಿದ್ದರೂ ಬಿಡೆವು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ

Published:
Updated:
ಕೊಲೆಗಡುಕರು ಪಾತಾಳದಲ್ಲಿದ್ದರೂ ಬಿಡೆವು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ

ಮೈಸೂರು: ಬಿಜೆಪಿ ಮತ್ತು ಸಂಘಪರಿವಾರದ ಕಾರ್ಯಕರ್ತರನ್ನು ಕೊಲೆ ಮಾಡಿದ ಆರೋಪಿಗಳು ಪಾತಾಳದಲ್ಲಿದ್ದರೂ ಹುಡುಕಿ ಬಂಧಿಸಿ ಶಿಕ್ಷಿಸುವೆವು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.

2016ರಲ್ಲಿ ಕೊಲೆಯಾದ ಬಿಜೆಪಿ ಕಾರ್ಯಕರ್ತ ಕ್ಯಾತಮಾರನಹಳ್ಳಿ ರಾಜು ಅವರ ಮನೆಗೆ ಶುಕ್ರವಾರ ಭೇಟಿ ನೀಡಿದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ಸಿದ್ದರಾಮಯ್ಯ ಅವರ ಸರ್ಕಾರದ ಅವಧಿಯಲ್ಲಿ ಬಿಜೆಪಿ ಮತ್ತು ಆರ್ ಎಸ್ ಎಸ್ ನ 25 ಕಾರ್ಯಕರ್ತರನ್ನು ಕೊಲೆ ಮಾಡಲಾಗಿದೆ. ರಾಜ್ಯದಲ್ಲಿ ಹಿಂಸೆ ಮಿತಿ ಮೀರಿದ್ದು, ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ಹಿಂಸೆಯ ಮೂಲಕವೇ ಬಿಜೆಪಿ ವಿಚಾರಧಾರೆಯನ್ನು ಮುಗಿಸಲು ಮುಂದಾಗಿರುವ ಸಿದ್ದರಾಮಯ್ಯ ಅವರ ಪ್ರಯತ್ನ ಫಲಿಸದು ಎಂದು ಆಕ್ರೋಶ ಹೊರಹಾಕಿದರು.

ಚುನಾವಣೆಯ ಬಳಿಕ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವ ವಿಶ್ವಾಸವಿದೆ. ಈ ಎಲ್ಲ ಪ್ರಕರಣಗಳ ತನಿಖೆ ನಡೆಸಿ ಆರೋಪಿಗಳನ್ನು ಶಿಕ್ಷಿಸದೇ ಬಿಡುವುದಿಲ್ಲ ಎಂದರು.

ರಾಜು ಕುಟುಂಬಕ್ಕೆ ಬಿಜೆಪಿ ರಾಜ್ಯ ಘಟಕದ ವತಿಯಿಂದ ₹ 5 ಲಕ್ಷ ಪರಿಹಾರ ನೀಡುವಂತೆ ಬಿ.ಎಸ್.ಯಡಿಯೂರಪ್ಪ ಅವರಿಗೆ ಸೂಚನೆ ನೀಡಿದರು. ಕೊಲೆ ಪ್ರಕರಣದ ತನಿಖೆಯನ್ನು ರಾಷ್ಟೀಯ ತನಿಖಾ ದಳಕ್ಕೆ ವಹಿಸುವಂತೆ ರಾಜು ತಾಯಿ ಚಂದ್ರಮ್ಮ ಮನವಿ ಮಾಡಿದರು.

ಕೇಂದ್ರ ಸಚಿವ ಅನಂತಕುಮಾರ್, ಸಂಸದ ಪ್ರತಾಪಸಿಂಹ ಇದ್ದರು.

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಜನಶಕ್ತಿ ಸಮಾವೇಶದಲ್ಲಿ ಅಮಿತ್ ಶಾ ಭಾಗಿ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry