ಡಿವೈಎಸ್‌ಪಿ ಹರೀಶ್‌ ವರ್ಗಾವಣೆಗೆ ದೂರು

7

ಡಿವೈಎಸ್‌ಪಿ ಹರೀಶ್‌ ವರ್ಗಾವಣೆಗೆ ದೂರು

Published:
Updated:

ರಾಯಚೂರು: ಡಿವೈಎಸ್‌ಯಾಗಿರುವ ಪಿ. ಹರೀಶ್, ಹತ್ತು ವರ್ಷಗಳಿಂದ ರಾಯಚೂರು ಜಿಲ್ಲೆಯಲ್ಲೇ ಕಾರ್ಯ ನಿರ್ವಹಿಸುತ್ತಿದ್ದಾರೆ. ಆದ್ದರಿಂದ ಅವರನ್ನು ವರ್ಗಾವಣೆ ಮಾಡಬೇಕು ಎಂದು ಬಿಜೆಪಿ ಜಿಲ್ಲಾ ಘಟಕವು ರಾಜ್ಯ ಚುನಾವಣಾ ಆಯುಕ್ತರಿಗೆ ದೂರು ನೀಡಿದೆ.

ಬಿಜೆಪಿ ನೀಡಿರುವ ದೂರು ಆಧರಿಸಿ ಆಯೋಗವು ಜಿಲ್ಲಾಧಿಕಾರಿಗೆ ಈ ಬಗ್ಗೆ ಸೂಚನೆ ನೀಡಿದೆ.

ಕೂಡಲೇ ವಿಚಾರಣೆಗೆ ಹಾಜರಾಗುವಂತೆ ಹರೀಶ್‌ ಗೆ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಗುರುವಾರ ನೋಟಿಸ್ ನೀಡಿದ್ದಾರೆ.

‘ಜಿಲ್ಲೆಯಾದ್ಯಂತ ಇದೇ ರೀತಿ ಹಲವು ಅಧಿಕಾರಿಗಳು ಇದ್ದಾರೆ. ಅಭ್ಯರ್ಥಿಗಳ ಸಂಬಂಧಿಗಳೂ ಕೂಡ ಕೆಲಸ ನಿರ್ವಹಿಸುತ್ತಿದ್ದು, ಕಾಂಗ್ರೆಸ್ ಮುಖಂಡರ ಬೆನ್ನೆಲುಬಾಗಿ ನಿಂತಿದ್ದಾರೆ. ಇವರು ಪೊಲೀಸ್ ಇಲಾಖೆಯ ವಿಶ್ವಾಸಾರ್ಹ ಮಾಹಿತಿಯನ್ನು ಸೋರಿಕೆ ಮಾಡುತ್ತಿದ್ದಾರೆ. ಇದರಿಂದ ಬಿಜೆಪಿಗೆ ಅನ್ಯಾಯ ಆಗುತ್ತದೆ’ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶರಣಪ್ಪಗೌಡ ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry