ಚಿರತೆ ದಾಳಿ: ಕರು, ಮೇಕೆ ಬಲಿ

7

ಚಿರತೆ ದಾಳಿ: ಕರು, ಮೇಕೆ ಬಲಿ

Published:
Updated:

ಮೈಸೂರು: ತಾಲ್ಲೂಕಿನ ಕೆಆರ್‌ಎಸ್‌ ಹಿನ್ನೀರಿನ ಹೊಸ ಆನಂದೂರು ಗ್ರಾಮದಲ್ಲಿ ಚಿರತೆ ದಾಳಿಗೆ ಕರು ಮತ್ತು ಮೇಕೆ ಬಲಿಯಾಗಿವೆ.

ಗ್ರಾಮದ ಹೊರವಲಯದಲ್ಲಿರುವ ಚಂದ್ರಶೇಖರ್‌ ಎಂಬುವರ ತೋಟದ ಮನೆಯಲ್ಲಿ ಬುಧವಾರ ರಾತ್ರಿ ಈ ದಾಳಿ ನಡೆದಿದ್ದು, ಗುರುವಾರ ಬೆಳಿಗ್ಗೆ ಗಮನಕ್ಕೆ ಬಂದಿದೆ.

ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಇಲಾಖೆ ಸಿಬ್ಬಂದಿ, ಪರಿಶೀಲನೆ ನಡೆಸಿದರು. ಇದೇ ಮೊದಲ ಬಾರಿಗೆ ಈ ಭಾಗದಲ್ಲಿ ಚಿರತೆ ಕಾಣಿಸಿಕೊಂಡಿದ್ದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನು ಇಟ್ಟಿದ್ದು, ಸಿಬ್ಬಂದಿ ತೋಟದಲ್ಲಿ ಮೊಕ್ಕಾಂ ಹೂಡಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry