'ಈಗಾಗಲೇ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ನೀತಿ ಸಂಹಿತೆ ಪಾಲನೆಯ ಬಗ್ಗೆ ನಿಗಾವಹಿಸಲು, ಅಧಿಕಾರಿ, ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಸೆಕ್ಟರ್ ಅಧಿಕಾರಿಗಳು, ಪ್ಲೈಯಿಂಗ್ ಸ್ಕ್ವಾಡ್, ವಿಡಿಯೋ ವೀಕ್ಷಣಾ ತಂಡ, ಚುನಾವಣಾ ವೆಚ್ಚ ಪರಿಶೀಲನೆ, ಚೆಕ್ಪೋಸ್ಟ್ ತಂಡ, ವಿವಿಧ ಪೊಲೀಸ್ ಅಧಿಕಾರಿಗಳ ತಂಡಗಳನ್ನು ರಚಿಸಲಾಗಿದೆ. ಈ ಎಲ್ಲ ತಂಡಗಳು ತಮಗೆ ವಹಿಸಿರುವ ಜವಾಬ್ದಾರಿಯನ್ನು ಚಾಚೂ ತಪ್ಪದೆ ನಿರ್ವಹಿಸಬೇಕು' ಎಂದರು.