ಅಕ್ರಮ ಮದ್ಯ ಮಾರಾಟಗಾರರ ಜೊತೆ ಪೊಲೀಸರು ಶಾಮೀಲು

7

ಅಕ್ರಮ ಮದ್ಯ ಮಾರಾಟಗಾರರ ಜೊತೆ ಪೊಲೀಸರು ಶಾಮೀಲು

Published:
Updated:
ಅಕ್ರಮ ಮದ್ಯ ಮಾರಾಟಗಾರರ ಜೊತೆ ಪೊಲೀಸರು ಶಾಮೀಲು

ಹಾವೇರಿ: ಚುನಾವಣಾ ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ನಗರ ಪೊಲೀಸ್ ಠಾಣೆಯ ಹೆಡ್‌ ಕಾನ್‌ಸ್ಟೆಬಲ್ ಎಚ್.ಟಿ. ಪಾಟೀಲ ಮತ್ತು ಎನ್‌.ಬಿ. ಚಿಕ್ಕಹರಕುಣಿ ಅವರನ್ನು ಅಮಾನತು ಮಾಡಿ ಜಿಲ್ಲಾ ಚುನಾವಣಾಧಿಕಾರಿ ಡಾ.ವೆಂಕಟೇಶ್‌ ಎಂ.ವಿ. ಆದೇಶ ಹೊರಡಿಸಿದ್ದಾರೆ. 

ಖಚಿತ ಮಾಹಿತಿ ಆಧಾರದಲ್ಲಿ ಉಪವಿಭಾಗಾಧಿಕಾರಿ ಪಿ.ಎನ್‌. ಲೋಕೇಶ್ ನೇತೃತ್ವದಲ್ಲಿ ಚುನಾವಣಾ ಫ್ಲೈಯಿಂಗ್‌ ಸ್ಕ್ವಾಡ್ ಶುಕ್ರವಾರ ನಗರದ ನಾಗೇಂದ್ರನಮಟ್ಟಿಯ ಎರಡು ಮನೆಗಳ ಮೇಲೆ ದಾಳಿ ನಡೆಸಿತ್ತು. ಆದರೆ, ಯಾವುದೇ ಮದ್ಯ ದಾಸ್ತಾನು ಕಂಡು ಬಂದಿರಲಿಲ್ಲ. 

ಫ್ಲೈಯಿಂಗ್ ಸ್ಕ್ವಾಡ್ ತಂಡದಲ್ಲಿದ್ದ  ಹೆಡ್ ಕಾನ್‌ಸ್ಟೆಬಲ್‌ಗಳು ಅಕ್ರಮ ಮದ್ಯ ಮಾರಾಟಗಾರರ ಜೊತೆ ಶಾಮೀಲಾಗಿರುವುದಲ್ಲದೆ, ಅವರಿಗೆ ದಾಳಿಯ ಮಾಹಿತಿ ನೀಡಿದ್ದಾರೆ ಎಂದು ಸ್ಥಳೀಯರು ದೂರಿದ್ದರು. ಈ ಕುರಿತು ಪರಿಶೀಲನೆ ನಡೆಸಿದ ಉಪವಿಭಾಗಧಿಕಾರಿಗಳು ಸಲ್ಲಿಸಿದ ವರದಿ ಆಧಾರದಲ್ಲಿ ಜಿಲ್ಲಾ ಚುನಾವಣಾಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry