ಹೋರಾಟ ಕೈಬಿಡುವಂತೆ ಗೆಹ್ಲೋಟ್‌ ಮನವಿ

7

ಹೋರಾಟ ಕೈಬಿಡುವಂತೆ ಗೆಹ್ಲೋಟ್‌ ಮನವಿ

Published:
Updated:

ನವದೆಹಲಿ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಕಾಯ್ದೆ ಕುರಿತು ಸುಪ್ರೀಂ ಕೋರ್ಟ್‌ ನೀಡಿದ್ದ ತೀರ್ಪಿನ ವಿರುದ್ಧ ಸರ್ಕಾರವನ್ನು ಎಚ್ಚರಿಸಲು ಸಂಘ–ಸಂಸ್ಥೆಗಳು ನಡೆಸುತ್ತಿರುವ ಹೋರಾಟವನ್ನು ಕೈಬಿಡುವಂತೆ ಸಾಮಾಜಿಕ ನ್ಯಾಯ ಸಚಿವ ತಾವರ್‌ಚಂದ್‌ ಗೆಹ್ಲೋಟ್‌ ಮನವಿ ಮಾಡಿದ್ದಾರೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆ 1989ರ ಅನ್ವಯ ದೂರು ನೀಡಿದ ಕೂಡಲೇ ಆರೋಪಿಗಳ ಬಂಧನ ಮತ್ತು ಪ್ರಕರಣ ದಾಖಲು ಅಗತ್ಯ ಇಲ್ಲ ಎಂದು ಸುಪ್ರೀಂ ಆದೇಶ ನೀಡಿತ್ತು.

ಕೋರ್ಟ್‌ ಆದೇಶಗೆ ಸಂಬಂಧಿಸಿದಂತೆ ಮುಂದಿನ ವಾರ ಕೇಂದ್ರ ಸರ್ಕಾರ ಮರುಪರಿಶೀಲನಾ ಅರ್ಜಿ ಸಲ್ಲಿಸಲು ನಿರ್ಧರಿಸಿದೆ ಎಂದು ಗೆಹ್ಲೋಟ್‌ ಟ್ವೀಟ್‌ ಮಾಡಿದ್ದಾರೆ.

ಸಚಿವಾಲಯದ ಉನ್ನತ ಅಧಿಕಾರಿಗಳು ಕಾನೂನು ತಜ್ಞರೊಂದಿಗೆ ಚರ್ಚೆ ನಡೆಸುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry