ಕಲ್ಲು ತೂರಾಟ: 19 ಜನರ ಬಂಧನ

7

ಕಲ್ಲು ತೂರಾಟ: 19 ಜನರ ಬಂಧನ

Published:
Updated:

ಬಸವಕಲ್ಯಾಣ: ತಾಲ್ಲೂಕಿನ ಕೌಡಿಯಾಳ ಗ್ರಾಮದ ಹತ್ತಿರ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ನಡೆದ ಅಪಘಾತದಲ್ಲಿ ಮೃತಪಟ್ಟ ಸಂಬಂಧಿಕರು ಹಾಗೂ ಗ್ರಾಮಸ್ಥರು ರಸ್ತೆ ತಡೆ ನಡೆಸಿದಾಗ ಕೆಲವರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ಆರೋಪದ ಮೇರೆಗೆ 19 ಜನರನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ  ಒಬ್ಬರು ಮೃತಪಟ್ಟಿದ್ದರು. ಪೊಲೀಸರು ಮೃತದೇಹವನ್ನು ಶವಪರೀಕ್ಷೆಗಾಗಿ ಆಸ್ಪತ್ರೆ ಗೆ ಸಾಗಿಸುತ್ತಿದ್ದಾಗ ಕೆಲವರು ರಸ್ತೆ ತಡೆ ನಡೆಸಿ, ಮೃತದೇಹವನ್ನು ಸಾಗಿಸಲು ಅಡ್ಡಿಪಡಿಸಿದ್ದರು.ಅಪಘಾತದ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ರು ಭರವಸೆ ನೀಡಿದ್ದರೂ ಪರಿಸ್ಥಿತಿ ಶಾಂತವಾಗಲಿಲ್ಲ. ಕೆಲವರು ಕಲ್ಲು ತೂರಾಟ ಸಹ ನಡೆಸಿದರು. ಇದರಿಂದ ಕರ್ತವ್ಯದಲ್ಲಿದ್ದ  ಸಬ್‌ ಇನ್‌ಸ್ಪೆಕ್ಟರ್‌ ಸಂತೋಷ ಗಾಯಗೊಂಡಿದ್ದು, ಬಸ್ ನ ಗಾಜು ಒಡೆದು ಹಾನಿಯಾಗಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry