ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾವೇರಿ ನಿರ್ವಹಣಾ ಮಂಡಳಿ ರಚಿಸಲು ಕೇಂದ್ರ ಸರ್ಕಾರ ವಿಫಲ: ಸುಪ್ರೀಂಗೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ ತಮಿಳುನಾಡು

Last Updated 31 ಮಾರ್ಚ್ 2018, 10:00 IST
ಅಕ್ಷರ ಗಾತ್ರ

ನವದೆಹಲಿ: ನಿಗದಿತ ಸಮಯದಲ್ಲಿ ಕಾವೇರಿ ನಿರ್ವಹಣಾ ಮಂಡಳಿ (ಸಿಎಂಬಿ) ರಚನೆ ಮಾಡಲು ವಿಫಲವಾದ ಕೇಂದ್ರ ಸರ್ಕಾರ ವಿರುದ್ಧ ತಮಿಳುನಾಡು ಸರ್ಕಾರ ಶನಿವಾರ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದೆ.

ಕೋರ್ಟ್‌ ನೀಡಿದ್ದ ಗಡುವು ಮಾರ್ಚ್‌ 29ಕ್ಕೆ ಮುಗಿದಿದ್ದು, ತಕ್ಷಣವೇ ಕ್ರಮಕೈಗೊಳ್ಳಬೇಕು ಎಂದು ತಮಿಳುನಾಡು ಸರ್ಕಾರ, ಕೇಂದ್ರದ ಮೇಲೆ ಒತ್ತಡ ಹೇರಿತ್ತು. ಇದೀಗ ನ್ಯಾಯಾಂಗ ನಿಂದನೆ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ಗಮನ ಸೆಳೆದಿದೆ.

ನದಿ ವಿವಾದ ಕುರಿತು ಫೆ.16ರಂದು ತೀರ್ಪು ನೀಡಿದ್ದ ಸುಪ್ರೀಂಕೋರ್ಟ್‌, ಆರು ವಾರಗಳಲ್ಲಿ ನಿರ್ವಹಣಾ ಮಂಡಳಿ ರಚಿಸುವಂತೆ ಆದೇಶಿಸಿತ್ತು.
ನೀರು ಹಂಚಿಕೆ ಸಂಬಂಧ ಮಂಡಳಿ ಜತೆಗೆ, ಕಾವೇರಿ ನೀರು ನಿಯಂತ್ರಣ ಸಮಿತಿ(ಸಿಡಬ್ಲ್ಯೂಆರ್‌ಸಿ) ರಚನೆ ಮಾಡುವಂತೆ ತಮಿಳುನಾಡು, ಕೇಂದ್ರ ಸರ್ಕಾರವನ್ನು ಒತ್ತಾಯಿಸಿತ್ತು.

ಮೇ.12ರಂದು ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ನಿಗದಿಯಾಗಿದ್ದು, ಕಾವೇರಿ ನಿರ್ವಹಣಾ ಮಂಡಳಿ ಸಂಬಂಧ ಕೇಂದ್ರ ಸರ್ಕಾರ ತೆಗೆದುಕೊಳ್ಳುವ ನಿರ್ಧಾರ ರಾಜ್ಯ ಚುನಾವಣೆ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT