ಕಾವೇರಿ ಕಣಿವೆಯಲ್ಲಿ ಉತ್ತಮ ಮಳೆ

7
ಹಾಸನ ಜಿಲ್ಲೆಯ ಗಂಡಸಿಯಲ್ಲಿ ಸಿಡಿಲಿಗೆ ಎರಡು ಹಸು ಬಲಿ

ಕಾವೇರಿ ಕಣಿವೆಯಲ್ಲಿ ಉತ್ತಮ ಮಳೆ

Published:
Updated:
ಕಾವೇರಿ ಕಣಿವೆಯಲ್ಲಿ ಉತ್ತಮ ಮಳೆ

ಮೈಸೂರು: ಕಾವೇರಿ ಕಣಿವೆ ವ್ಯಾಪ್ತಿಯ ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ ಮತ್ತು ಕೊಡಗು ಜಿಲ್ಲೆಯಲ್ಲಿ ಶುಕ್ರವಾರ ಗುಡುಗು, ಬಿರುಗಾಳಿ, ಆಲಿಕಲ್ಲು ಸಹಿತ ಮಳೆ ಸುರಿಯಿತು.

ಅರಸೀಕೆರೆ ತಾಲ್ಲೂಕಿನ ಗಂಡಸಿಯಲ್ಲಿ ಸಿಡಿಲಿಗೆ ಎರಡು ಹಸು ಮೃತಪಟ್ಟಿವೆ. ಆಲೂರು, ಚನ್ನರಾಯಪಟ್ಟಣದಲ್ಲಿ ಬಿರುಸಿನ ಮಳೆಯಾಗಿದೆ. ಪಿರಿಯಾಪಟ್ಟಣ, ಕೆ.ಆರ್.ನಗರ, ಎಚ್.ಡಿ.ಕೋಟೆ, ಹುಣಸೂರು ತಾಲ್ಲೂಕಿನಲ್ಲಿಯೂ ಮಳೆಯಾಯಿತು. ಬಂಡೀಪುರ ರಾಷ್ಟ್ರೀಯ ಉದ್ಯಾನದಲ್ಲೂ ಮಳೆ ಬಿತ್ತು.

ನಾಗಮಂಗಲದಲ್ಲಿ ಅರ್ಧಗಂಟೆ ಮಳೆಯಾಯಿತು. ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಗ್ರಾಮದಲ್ಲಿ 15 ನಿಮಿಷ ಮಳೆ ಸುರಿಯಿತು. ಯಳಂದೂರು ಪಟ್ಟಣದಲ್ಲೂ ಬಿರುಗಾಳಿ ಸಹಿತ ಸಾಧಾರಣ ಮಳೆಯಾಯಿತು.

ಧರೆಗುರುಳಿದ ಮರಗಳು: ಕೊಡಗು ಜಿಲ್ಲೆಯ ಕುಶಾಲನಗರ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಆಲಿಕಲ್ಲು ಸಹಿತ ಒಂದು ಗಂಟೆಗೂ ಹೆಚ್ಚು ಕಾಲ ಮಳೆ ಸುರಿಯಿತು. ಇಲ್ಲಿನ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದ ಅಂಗಡಿಗಳಿಗೆ ನೀರು ನುಗ್ಗಿತು. ಮುಳ್ಳುಸೋಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವೆಡೆ ಮರಗಳು ಧರೆಗುರುಳಿವೆ. ಕೆಲವು ಕಡೆ ವಿದ್ಯುತ್ ಕಂಬಗಳಿಗೂ ಹಾನಿಯಾಗಿದ್ದು, ವಿದ್ಯುತ್ ಸರಬರಾಜು ಸ್ಥಗಿತಗೊಂಡಿದೆ. ಸುಂಟಿಕೊಪ್ಪ ವ್ಯಾಪ್ತಿಯಲ್ಲೂ ಆಲಿಕಲ್ಲು ಸಹಿತ ಬಿರುಸಿನ ಮಳೆಯಾಯಿತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry