ಹಣ ಸಾಗಣೆ: ದಾಖಲೆ ಕಡ್ಡಾಯ– ಡಿ.ಸಿ

7
ಜಿಲ್ಲಾಧಿಕಾರಿ ಸಸಿಕಾಂತ್‌ ಸೆಂಥಿಲ್‌ ಎಚ್ಚರಿಕೆ

ಹಣ ಸಾಗಣೆ: ದಾಖಲೆ ಕಡ್ಡಾಯ– ಡಿ.ಸಿ

Published:
Updated:

ಮಂಗಳೂರು: ಚುನಾವಣಾ ನೀತಿಸಂಹಿತೆ ಜಾರಿಯಾಗಿರುವುದರಿಂದ ₹ 50,000ಕ್ಕಿಂತ ಹೆಚ್ಚಿನ ನಗದು ಸಾಗಿಸುವಾಗ ದಾಖಲೆ ಹೊಂದಿರುವುದು ಕಡ್ಡಾಯ. ದಾಖಲೆ ಇಲ್ಲದ ನಗದನ್ನು ವಶಕ್ಕೆ ಪಡೆಯಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್‌ ಎಚ್ಚರಿಕೆ ನೀಡಿದ್ದಾರೆ.

ದಾಖಲೆ ಸಹಿತವಾಗಿ ₹ 10 ಲಕ್ಷ ಅಥವಾ ಅದಕ್ಕಿಂತ ಹೆಚ್ಚಿನ ಮೊತ್ತದ ನಗದು ಸಾಗಿಸುತ್ತಿರುವುದು ಪತ್ತೆಯಾದರೂ ಅಂತಹ ಪ್ರಕರಣಗಳ ತನಿಖೆಯನ್ನು ಆದಾಯ ತೆರಿಗೆ ಇಲಾಖೆಯ ಸುಪರ್ದಿಗೆ ವಹಿಸಲಾಗುವುದು. ಅನುಮಾನಾಸ್ಪದವಾಗಿ ನಗದು ವಶಪಡಿಸಿಕೊಂಡ ಪ್ರಕರಣಗಳಲ್ಲಿ ದಾಖಲೆಗಳ ಸತ್ಯಾಸತ್ಯತೆ ಪರಿಶೀಲಿಸಿ, ತುರ್ತಾಗಿ ತೀರ್ಮಾನ ಕೈಗೊಳ್ಳಲು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘₹ 10,000ಕ್ಕಿಂತ ಹೆಚ್ಚಿನ ಮೌಲ್ಯದ ಮದ್ಯ ಮತ್ತು ಉಡುಗೊರೆ ಸಾಮಾಗ್ರಿಗಳನ್ನು ಸಾಗಿಸಲು ಅವಕಾಶವಿಲ್ಲ. ಅಂತಹ ಪ್ರಕರಣಗಳು ಪತ್ತೆಯಾದರೆ ಅವುಗಳನ್ನು ವಶಕ್ಕೆ ಪಡೆಯಲಾಗುವುದು. ಚುನಾವಣಾ ಮಾದರಿ ನೀತಿ ಸಂಹಿತೆಯು ಮೇ 18ರವರೆಗೆ ಜಾರಿಯಲ್ಲಿ ಇರಲಿದೆ. ಈ ಅವಧಿಯಲ್ಲಿ ಸಾರ್ವಜನಿಕರು ಯಾವುದೇ ರಾಜಕೀಯೇತರ ಕಾರ್ಯಕ್ರಮ ಆಯೋಜಿಸಬೇಕಾದರೆ ಕ್ಷೇತ್ರ ಚುನಾವಣಾಧಿಕಾರಿಗೆ ಮುಂಚಿತವಾಗಿ ಮಾಹಿತಿ ನೀಡಬೇಕು. ನೀತಿಸಂಹಿತೆ ಉಲ್ಲಂಘನೆ ಆಗದಂತೆ ಎಚ್ಚರಿಕೆ ವಹಿಸಬೇಕು’ ಎಂದು ಎಚ್ಚರಿಕೆ ನೀಡಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry