ಜೆಡಿಎಸ್‌ ಬಗ್ಗೆ ಮಾತನಾಡಲು ಸಿದ್ದರಾಮಯ್ಯಗೆ ನೈತಿಕತೆ ಇಲ್ಲ: ಎಚ್‌.ಡಿ.ದೇವೇಗೌಡ

7

ಜೆಡಿಎಸ್‌ ಬಗ್ಗೆ ಮಾತನಾಡಲು ಸಿದ್ದರಾಮಯ್ಯಗೆ ನೈತಿಕತೆ ಇಲ್ಲ: ಎಚ್‌.ಡಿ.ದೇವೇಗೌಡ

Published:
Updated:
ಜೆಡಿಎಸ್‌ ಬಗ್ಗೆ ಮಾತನಾಡಲು ಸಿದ್ದರಾಮಯ್ಯಗೆ ನೈತಿಕತೆ ಇಲ್ಲ: ಎಚ್‌.ಡಿ.ದೇವೇಗೌಡ

ಚಿಕ್ಕಬಳ್ಳಾಪುರ: ‘ಜೆಡಿಎಸ್ ಬಗ್ಗೆ ಮಾತನಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೈತಿಕತೆ ಇಲ್ಲ. ಅವರು ವಿರೋಧ ಪಕ್ಷದ ನಾಯಕರಾಗಿದ್ದ ವೇಳೆ ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜತೆ ಎಂತಹ ಸಂಬಂಧ ಇಟ್ಟುಕೊಂಡಿದ್ದರು ಎಂಬುದು ಎಲ್ಲರಿಗೂ ಗೊತ್ತು’ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಯಾರಿಂದಲೂ ಜೆಡಿಎಸ್ ಮುಗಿಸಲು ಸಾಧ್ಯವಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್, ದೇಶದಲ್ಲಿ ಬಿಜೆಪಿ ಲೂಟಿ ಮಾಡುತ್ತಿವೆ. ನಾವು ಯಾವುದೇ ಪಕ್ಷದ ಜತೆ ಹೊಂದಾಣಿಕೆ ಮಾಡಿಕೊಂಡಿಲ್ಲ. ಸಿಪಿಐಎಂ ಹಾಗೂ ಸಿಪಿಐ ಜತೆ ಹೊಂದಾಣಿಕೆಗೆ ಮುಂದಾಗಿದ್ದೆವು ಆದರೆ ಅವರು ಮುಂದೆ ಬರಲಿಲ್ಲ’ ಎಂದು ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry