ಅಂಬೇಡ್ಕರ್‌ ಪ್ರತಿಮೆ ಧ್ವಂಸ, ಬಂಧನಕ್ಕೆ ಆಗ್ರಹ

7

ಅಂಬೇಡ್ಕರ್‌ ಪ್ರತಿಮೆ ಧ್ವಂಸ, ಬಂಧನಕ್ಕೆ ಆಗ್ರಹ

Published:
Updated:
ಅಂಬೇಡ್ಕರ್‌ ಪ್ರತಿಮೆ ಧ್ವಂಸ, ಬಂಧನಕ್ಕೆ ಆಗ್ರಹ

ಸಿದ್ಧಾರ್ಥನಗರ (ಉತ್ತರ ಪ್ರದೇಶ): ಇಲ್ಲಿನ ಗೋಹನಿಯಾ ಗ್ರಾಮದ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆಯನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದು, ಇದನ್ನು ಖಂಡಿಸಿ ಗ್ರಾಮಸ್ಥರು ಶನಿವಾರ ಪ್ರತಿಭಟನೆ ನಡೆಸಿದ್ದಾರೆ.

‘ಪ್ರತಿಮೆಯ ಜಾಗದಲ್ಲಿ ಬೇರೆ ಪ್ರತಿಮೆ ಸ್ಥಾಪಿಸಲಾಗಿದೆ. ಅಪರಿಚಿತರ ವಿರುದ್ಧ ದೂರು ದಾಖಲಿಸಿಕೊಳ್ಳಲಾಗಿದೆ. ಅವರ ಪತ್ತೆಗೆ ಕಾರ್ಯಾಚರಣೆ ನಡೆಸಲಾಗುತ್ತಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಧರಮ್‌ವೀರ್‌ ತಿಳಿಸಿದ್ದಾರೆ.

ಪ್ರತಿಮೆಗಳ ಭದ್ರತೆಗೆ ಸಿಎಂ ಆದೇಶ: ಪ್ರತಿಮೆಗಳ ಭದ್ರತೆ ಕುರಿತಂತೆ ಸೂಕ್ತ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಜಿಲ್ಲಾ ಮ್ಯಾಜಿಸ್ಟ್ರೇಟ್‌ ಮತ್ತು ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ನಿರ್ದೇಶನ ನೀಡಿದ್ದಾರೆ. ಅಲ್ಲದೆ, ಶಾಂತಿ ಮತ್ತು ಸೌಹಾರ್ದತೆ ಕದಡುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry