ಸಚಿವ ಮಂಜುಗೆ ನೋಟಿಸ್

7

ಸಚಿವ ಮಂಜುಗೆ ನೋಟಿಸ್

Published:
Updated:

ಹಾಸನ: ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯಲ್ಲಿ ಮಹಿಳಾ ಸಿಬ್ಬಂದಿ ಬಾಗಿಲು ಹಾಕಿಕೊಂಡು ಕೆಲಸ ಮಾಡುತ್ತಿದ್ದ ಸಂಬಂಧ ಸಚಿವ ಎ.ಮಂಜು ಅವರಿಗೆ ಜಿಲ್ಲಾ ಚುನಾವಣಾಧಿಕಾರಿ ರೋಹಿಣಿ ಸಿಂಧೂರಿ ಕಾರಣ ಕೇಳಿ ನೋಟಿಸ್‌ ನೀಡಿದ್ದಾರೆ.

‘ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿ ತಂಡ ಪರಿಶೀಲನೆ ನಡೆಸಿದಾಗ ಕಚೇರಿಯಲ್ಲಿ ಮಹಿಳಾ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದು ಕಂಡು ಬಂದಿದೆ’ ಎಂದು ರೋಹಿಣಿ ತಿಳಿಸಿದರು.

‘ಈ ಕಟ್ಟಡ ಲೋಕೋಪಯೋಗಿ ಇಲಾಖೆ ಅಧೀನದಲ್ಲಿದೆ. ಹೀಗಿದ್ದರೂ ರಾಜಕೀಯ ವ್ಯಕ್ತಿಗಳ ಕಾರ್ಯಚಟುವಟಿಕೆ ನಡೆಯಲು ಹೇಗೆ ಅವಕಾಶ ಕಲ್ಪಿಸಲಾಯಿತು ಎಂದು ಇಲಾಖೆ ಅಧಿಕಾರಿಗಳಿಂದ ಕಾರಣ ಕೇಳಲಾಗಿದೆ. ವಿವರಣೆ ನೀಡಲು ಏ. 2ರ ಬೆಳಿಗ್ಗೆ 11 ಗಂಟೆ ವರೆಗೆ ಕಾಲಾವಕಾಶ ನೀಡಲಾಗಿದೆ. ನಂತರ ಆಯೋಗದ ನೀತಿ ಸಂಹಿತೆ ಅನ್ವಯ ಕ್ರಮ ಜರುಗಿಸಲಾಗುವುದು’ ಎಂದು ಹೇಳಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry