ಎಂಇಎಸ್‌ ಅಭ್ಯರ್ಥಿಗಳನ್ನು ಬೆಂಬಲಿಸಿ: ಪವಾರ್‌

7

ಎಂಇಎಸ್‌ ಅಭ್ಯರ್ಥಿಗಳನ್ನು ಬೆಂಬಲಿಸಿ: ಪವಾರ್‌

Published:
Updated:

ಬೆಳಗಾವಿ: ‘ಕರ್ನಾಟಕ– ಮಹಾರಾಷ್ಟ್ರ ಗಡಿ ಪ್ರದೇಶಗಳ ಕುರಿತು ಸುಪ್ರೀಂಕೋರ್ಟ್‌ನಲ್ಲಿ ನಡೆಯುತ್ತಿರುವ ವಿಚಾರಣೆಯಲ್ಲಿ ನಮ್ಮ ವಾದಕ್ಕೆ ಹೆಚ್ಚಿನ ಬಲ ಬರಬೇಕಾದರೆ, ಚುನಾವಣೆಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿಯ (ಎಂಇಎಸ್‌) ಅಭ್ಯರ್ಥಿಗಳನ್ನು ಬೆಂಬಲಿಸಬೇಕು’ ಎಂದು ಎನ್‌ಸಿಪಿ ಅಧ್ಯಕ್ಷ ಶರದ್‌ ಪವಾರ್‌ ಶನಿವಾರ ಇಲ್ಲಿ ಹೇಳಿದರು.

ಮಹಾರಾಷ್ಟ್ರ ಏಕೀಕರಣ ಸಮಿತಿಯ ಬೆಳಗಾವಿ ಘಟಕವು ಆಯೋಜಿಸಿದ್ದ ಸಮಾರಂಭದಲ್ಲಿ ಮಾತನಾಡಿದ ಅವರು, ‘ಭಾಷಾವಾರು ಪ್ರಾಂತಗಳ ರಚನೆ ಸಂದರ್ಭದಲ್ಲಿ ಗಡಿಭಾಗದ ಮರಾಠಿಗರಿಗೆ ಅನ್ಯಾಯವಾಗಿದೆ. ಇದನ್ನು ಸರಿಪಡಿಸುವಂತೆ 1956ರಿಂದಲೇ ಹೋರಾಟ ಮಾಡಿಕೊಂಡು ಬರಲಾಗಿದೆ. ಇಷ್ಟು ದಿನ ಬೀದಿಗಳ ಮೇಲೆ ನಡೆಯುತ್ತಿದ್ದ ಹೋರಾಟವು ಈಗ ಸುಪ್ರೀಂ ಕೋರ್ಟ್‌ ತಲುಪಿದೆ. ನ್ಯಾಯಾಲಯದಲ್ಲಿ ನಮ್ಮ ವಾದ ಬಲಗೊಳ್ಳಬೇಕಾದರೆ ಹೆಚ್ಚೆಚ್ಚು ಜನಪ್ರತಿನಿಧಿಗಳು ನಮ್ಮವರಾಗಿರಬೇಕು’ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry