7

ಆಗ್ನೇಯ ಶಿಕ್ಷಕರ ಕ್ಷೇತ್ರ ರಾಮಪ್ಪ ಅಭ್ಯರ್ಥಿ

Published:
Updated:

ಬೆಂಗಳೂರು: ವಿಧಾನಪರಿಷತ್ತಿನ ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಜೂನ್‌ನಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಎಂ. ರಾಮಪ್ಪ ಸ್ಪರ್ಧಿಸಲಿದ್ದಾರೆ.

ಚಳ್ಳಕೆರೆಯ ನೇರಲಗುಂಟೆಯವ ರಾದ ರಾಮಪ್ಪ, ಸದ್ಯ ಮೈಸೂರಿನಲ್ಲಿ ಉದ್ಯಮಿ. ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತರಾದ ಇವರು, 2014ರ ಲೋಕಸಭಾ ಚುನಾವಣೆಯಲ್ಲಿ ಚಿತ್ರದುರ್ಗದಿಂದ ಕಾಂಗ್ರೆಸ್‌ ಟಿಕೆಟ್‌ ಬಯಸಿದ್ದರು.

ಚಿತ್ರದುರ್ಗ, ದಾವಣಗೆರೆ, ತುಮ ಕೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳು ಈ ಮತ ಕ್ಷೇತ್ರದ ವ್ಯಾಪ್ತಿಯಲ್ಲಿವೆ. ‘ರಾಮಪ್ಪ ಅಭ್ಯರ್ಥಿ’ ಎಂದು ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ ಶನಿವಾರ ಅಧಿಕೃತವಾಗಿ ಪ್ರಕಟಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry