ಶುಕ್ರವಾರ, ಡಿಸೆಂಬರ್ 13, 2019
19 °C

ಸಿದ್ಧಗಂಗಾ ಮಠ: ಡಾ.ಶಿವಕುಮಾರ ಸ್ವಾಮೀಜಿಗೆ 111ನೇ ಜನ್ಮದಿನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಿದ್ಧಗಂಗಾ ಮಠ: ಡಾ.ಶಿವಕುಮಾರ ಸ್ವಾಮೀಜಿಗೆ 111ನೇ ಜನ್ಮದಿನ

ತುಮಕೂರು: ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ಅವರ 111ನೇ ಜನ್ಮದಿನದ ಕಾರ್ಯಕ್ರಮಕ್ಕೆ111 ಜ್ಯೋತಿ ಬೆಳಗುವ ಮೂಲಕ ಚಾಲನೆ ನೀಡಲಾಯಿತು. 

ನಾಡಿನ ವಿವಿಧ ಮಠಾಧೀಶರು, ಸಾವಿರಾರು ಭಕ್ತರು ಭಾಗಿಯಾಗಿದ್ದು, ಹಳೇ ಮಠದ ಆವರಣದಲ್ಲಿ ವಿವಿಧ ಮಠಾಧೀಶರು ಸ್ವಾಮೀಜಿ ಅವರ ಪಾದಪೂಜೆ ನಡೆಸಿದರು. 

ಆದಿಚುಂಚನಗಿರಿ ಮಠಾಧೀಶ ನಿರ್ಮಲಾನಂದನಾಥ ಸ್ವಾಮೀಜಿ, ಬೆಂಗಳೂರು ಬೇಲಿಮಠದ ಶಿವರುದ್ರ ಸ್ವಾಮೀಜಿ, ಕನಕಪುರ ದೇಗುಲಮಠದ ಮುಮ್ಮಡಿ ನಿರ್ವಾಣ ಸ್ವಾಮೀಜಿ, ಚಿತ್ರದುರ್ಗ ಬೃಹನ್ಮಠದ ಶಿವಮೂರ್ತಿ ಮುರುಘಾ ಶರಣರು, ಸುತ್ತೂರು ಮಠ, ಮರಳೇಗವಿ ಮಠ ಮಠಾಧೀಶರು ವೇದಿಕೆಯಲ್ಲಿ ಉಪಸ್ಥಿತಿರಿದ್ದಾರೆ.

ಚುನಾವಣಾ ನೀತಿ ಹಿನ್ನೆಲೆಯಲ್ಲಿ ಯಾವುದೇ ರಾಜಕೀಯ ನಾಯಕರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ. ಯಡಿಯೂರಪ್ಪ, ಸಿ.ಪಿ.ಯೋಗೇಶ್ವರ್ ಭಾಗಿಯಾಗಿದ್ದು, ವೇದಿಕೆ ಮುಂಭಾಗದ ಮಠಾಧೀಶರ ಸಾಲಿನಲ್ಲಿ ಕುಳಿತಿದ್ದಾರೆ. 

 

ಪ್ರತಿಕ್ರಿಯಿಸಿ (+)