ಸೋಮವಾರ, ಜುಲೈ 13, 2020
24 °C

ಉಗ್ರರ ವಿರುದ್ಧ ಸೇನೆ, ಪೊಲೀಸ್‌ ಕಾರ್ಯಾಚರಣೆ: ಇಬ್ಬರು ಯೋಧರು, ಇಬ್ಬರು ನಾಗರಿಕರು ಮೃತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಗ್ರರ ವಿರುದ್ಧ ಸೇನೆ, ಪೊಲೀಸ್‌ ಕಾರ್ಯಾಚರಣೆ: ಇಬ್ಬರು ಯೋಧರು, ಇಬ್ಬರು ನಾಗರಿಕರು ಮೃತ

ಶ್ರೀನಗರ: ಹಿಜ್ಬುಲ್ ಮುಜಾಹಿದ್ದೀನ್‌ ಮತ್ತು ಲಷ್ಕರ್‌–ಎ–ತಯಬಾ(ಎಲ್‌ಇಟಿ) ಸಂಘಟನೆಗಳಿಗೆ ಸೇರಿದ ಎಂಟು ಉಗ್ರರು, ಭಾರತೀಯ ಸೇನೆಯ ಇಬ್ಬರು ಯೋಧರು ಹಾಗೂ ಇಬ್ಬರು ನಾಗರಿಕರು ಭಾನುವಾರ ನಡೆದ ಗುಂಡಿನ ಚಕಮಕಿಯಲ್ಲಿ ಮೃತಪಟ್ಟಿದ್ದಾರೆ.

ದಕ್ಷಿಣ ಕಾಶ್ಮೀರದ ಅನಂತನಾಗ್‌ ಮತ್ತು ಸೋಫಿಯಾನ್‌ ಜಿಲ್ಲೆಯಲ್ಲಿ ಉಗ್ರರ ವಿರುದ್ಧ ಮೂರು ಪ್ರತ್ಯೇಕ ಕಾರ್ಯಾಚರಣೆ ನಡೆಸಲಾಯಿತು. ಸೋಫಿಯಾನ್‌ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆಯ ಇಬ್ಬರು ಯೋಧರು ಮೃತಪಟ್ಟಿದ್ದಾರೆ.

ದಕ್ಷಿಣ ಸೋಫಿಯಾನ್‌ನ ದ್ರಾಗದ್‌ ಮತ್ತು ಕಚ್‌ದೋರ ಪ್ರದೇಶದಲ್ಲಿ ಪ್ರತಿಭಟನಾ ನಿರತ ನಾಗರಿಕರು ಭದ್ರತಾ ಪಡೆ ನಡೆಸುತ್ತಿದ್ದ ಕಾರ್ಯಾಚರಣೆಯಲ್ಲಿ ಮೃತಪಟ್ಟಿದ್ದಾರೆ. ಇದೇ ವೇಳೆ ಹತ್ತಾರು ಪ್ರತಿಭಟನಾಕಾರರು ಗಾಯಗೊಂಡಿದ್ದಾರೆ.

ಭಾರತೀಯ ಸೇನೆಯ ಲೆಫ್ಟಿನೆಂಟ್‌ ಉಮ್ಮರ್‌ ಫಯಾಜ್‌ ಹತ್ಯೆಯಲ್ಲಿ ಭಾಗಿಯಾಗಿದ್ದ ಇಬ್ಬರು ಉಗ್ರರು ಇದೇ ಕಾರ್ಯಾಚರಣೆಯಲ್ಲಿ ಬಲಿಯಾಗಿದ್ದಾರೆ.

ಇಂದಿನ ಕಾರ್ಯಾಚರಣೆಯಲ್ಲಿ ಬಲಿಯಾದ ಎಲ್ಲ ಉಗ್ರರು ಸ್ಥಳೀಯರು ಎಂದು ಸೇನೆಯ ಅಧಿಕಾರಿ ಎಕೆ ಭಟ್‌ ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.