ಭಾನುವಾರ, ಡಿಸೆಂಬರ್ 15, 2019
25 °C

ಲಿಂಗಾಯತ ಪ್ರತ್ಯೇಕ ಧರ್ಮದ ಸ್ಥಾನಮಾನ: ಬಿಜೆಪಿ ನಾಯಕರ ಭಿನ್ನ ಹೇಳಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಲಿಂಗಾಯತ ಪ್ರತ್ಯೇಕ ಧರ್ಮದ ಸ್ಥಾನಮಾನ: ಬಿಜೆಪಿ ನಾಯಕರ ಭಿನ್ನ ಹೇಳಿಕೆ

ಬೆಂಗಳೂರು: ಲಿಂಗಾಯತ ಪ್ರತ್ಯೇಕ ಧರ್ಮ ಸ್ಥಾನಮಾನ ಕರ್ನಾಟಕ ಸರ್ಕಾರ ಸಲ್ಲಿಸಿರುವ ಶಿಫಾರಸು ಪತ್ರಕ್ಕೆ ಸಂಬಂಧಿಸಿದಂತೆ ಬಿಜೆಪಿಯ ರಾಷ್ಟ್ರೀಯ ನಾಯಕರು ಭಿನ್ನ ಹೇಳಿಕೆಗಳನ್ನು ನೀಡಿದ್ದು, ಇದೀಗ ಚರ್ಚೆಗೆ ಗ್ರಾಸವಾಗಿದೆ.

ಲಿಂಗಾಯತ ಅಲ್ಪಸಂಖ್ಯಾತ ಧರ್ಮ ಮಾನ್ಯತೆಗಾಗಿ ಕರ್ನಾಟಕ ಸರ್ಕಾರ ಸಲ್ಲಿಸಿರುವ ಪ್ರಸ್ತಾವನೆ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯಕ್ಕೆ ತಲುಪಿದೆ ಎಂದು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಕ್ತಾರ್‌ ಅಬ್ಬಾಸ್‌ ನಖ್ವಿ ಅವರು ಹೇಳಿದ್ದರು. ಕರ್ನಾಟಕ ಸರ್ಕಾರದ ಶಿಫಾರಸು ಕೇಂದ್ರವನ್ನು ತಲುಪಿದೆಯೇ? ಎಂದು ಕೇಳಲಾಗಿದ್ದ ಪ್ರಶ್ನೆಯೊಂದಕ್ಕೆ ಮಾರ್ಚ್‌ 28ರಂದು ಲೋಕಸಭೆಯಲ್ಲಿ ಉತ್ತರಿಸಿದ್ದರು.

ಆದರೆ ಶನಿವಾರ ಮೈಸೂರಿನಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ, ‘ಲಿಂಗಾಯತ ಪ್ರತ್ಯೇಕ ಧರ್ಮದ ಸ್ಥಾನಮಾನ ನೀಡುವ ಬಗ್ಗೆ ವಿಧಾನಸಭಾ ಚುನಾವಣೆ ಬಳಿಕ ಕೇಂದ್ರ ಸರ್ಕಾರ ತನ್ನ ನಿಲುವು ಪ್ರಕಟಿಸಲಿದೆ. ಚುನಾವಣೆ ಸಂದರ್ಭದಲ್ಲಿ ಜನರ ಭಾವನೆಗಳೊಂದಿಗೆ ನಾವು ಚೆಲ್ಲಾಟ ಆಡುವುದಿಲ್ಲ. ಅಷ್ಟಕ್ಕೂ ರಾಜ್ಯ ಸರ್ಕಾರದ ಶಿಫಾರಸು ಪತ್ರ ಇದುವರೆಗೆ ಕೇಂದ್ರ ತಲುಪಿಲ್ಲ’ ಎಂದು ಹೇಳಿದ್ದರು.

ಬಿಜೆಪಿ ನಾಯಕರು ನೀಡಿರುವ ಭಿನ್ನ ಹೇಳಿಕೆಗಳು ಇದೀಗ ಚರ್ಚೆಗೆ ದಾರಿಮಾಡಿಕೊಟ್ಟಿವೆ.

ಪ್ರತಿಕ್ರಿಯಿಸಿ (+)