ಮಂಗಳವಾರ, ಜೂಲೈ 7, 2020
24 °C
ಕಾಗಿನೆಲೆಯಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಊಟದ ವ್ಯವಸ್ಥೆಗೆ ಅನುಮತಿ ನಿರಾಕರಣೆ

ಚುನಾವಣಾ ಆಯೋಗದ ವಿರುದ್ಧ ಧರಣಿ: ಎಚ್ಚರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚುನಾವಣಾ ಆಯೋಗದ ವಿರುದ್ಧ ಧರಣಿ: ಎಚ್ಚರಿಕೆ

ಶಿವಮೊಗ್ಗ:  ಹಾವೇರಿ ಜಿಲ್ಲೆ ಕಾಗಿನೆಲೆಯಲ್ಲಿ ಇದೇ 3ರಂದು ಬಿಜೆಪಿ ಹಮ್ಮಿಕೊಂಡಿರುವ ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಊಟದ ವ್ಯವಸ್ಥೆ ಮಾಡದಂತೆ ಚುನಾವಣಾ ಆಯೋಗ ತಾಕೀತು ಮಾಡಿದೆ. ಇದು ಸರಿಯಲ್ಲ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಆಕ್ಷೇಪ ವ್ಯಕ್ತಪಡಿಸಿದರು.

ಸೋಮವಾರ (ಏ. 2) ಬೆಳಿಗ್ಗೆ 11ರ ಒಳಗೆ ಅನುಮತಿ ನೀಡದಿದ್ದರೆ ಹಾವೇರಿ ಜಿಲ್ಲಾ ಚುನಾವಣಾಧಿಕಾರಿ ಕಚೇರಿ ಮುಂದೆ ಧರಣಿ ನಡೆಸಲಾಗುವುದು ಎಂದು ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಎಚ್ಚರಿಕೆ ನೀಡಿದರು.

ಪಕ್ಷ ಹಾಗೂ ಅಭ್ಯರ್ಥಿಗಳಿಗೆ ಖರ್ಚು ಮಾಡಲು ಆಯೋಗವೇ ಮೊತ್ತ ನಿಗದಿ ಮಾಡಿದೆ. ಸಮಾವೇಶದ ವೆಚ್ಚವನ್ನು ಪಕ್ಷದ ಲೆಕ್ಕಕ್ಕೆ ಸೇರಿಸಿ, ಆಯೋಗಕ್ಕೆ ಸಲ್ಲಿಸಲಾಗುವುದು. ಹಾಗಾಗಿ, ಅನುಮತಿ ನೀಡಬೇಕು ಎಂದು ಈಶ್ವರಪ್ಪ ಒತ್ತಾಯಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.