ಮಂಗಳವಾರ, ಡಿಸೆಂಬರ್ 10, 2019
17 °C

ಏ.4: ರಾಹುಲ್‌ ಗಾಂಧಿ ಸಿದ್ಧಗಂಗಾ ಮಠಕ್ಕೆ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಏ.4: ರಾಹುಲ್‌ ಗಾಂಧಿ ಸಿದ್ಧಗಂಗಾ ಮಠಕ್ಕೆ ಭೇಟಿ

ತುಮಕೂರು: ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಬುಧವಾರ (ಏ.4ರಂದು) ಮಧ್ಯಾಹ್ನ 2ಗಂಟೆಗೆ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡುವರು ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಹೇಳಿದರು.

ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ’ಮಠಕ್ಕೆ ಭೇಟಿ ನೀಡಿದ ನಂತರ ಅವರು ನಗರದ ಪ್ರಮುಖ ಬೀದಿಗಳಲ್ಲಿ ರೋಡ್‌ ಷೋ ನಡೆಸಲಿದ್ದಾರೆ. ನಂತರ ಟೌನ್‌ಹಾಲ್‌ ವೃತ್ತದ ಬಳಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡುವರು’ ಎಂದರು.

ಗೂಳೂರು ಮಾರ್ಗವಾಗಿ ಜನಾಶೀರ್ವಾದ ಯಾತ್ರೆ ಕುಣಿಗಲ್‌ ಪಟ್ಟಣಕ್ಕೆ ತಲುಪಲಿದೆ. ಅಲ್ಲಿಯೂ ಚಿಕ್ಕದಾದ ಸಾರ್ವಜನಿಕ ಸಭೆಯನ್ನು ಹಮ್ಮಿಕೊಳ್ಳಲಾಗಿದೆ. ನಂತರ ಮಾಗಡಿಯಲ್ಲಿ ಒಂದು ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಪ್ರತಿಕ್ರಿಯಿಸಿ (+)