ಶುಕ್ರವಾರ, ಡಿಸೆಂಬರ್ 6, 2019
25 °C

ಖೂಬಾ ಬಿಜೆಪಿ ಸೇರ್ಪಡೆಗೆ ವಿರೋಧ: ಕಾರ್ಯಕರ್ತರ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಖೂಬಾ ಬಿಜೆಪಿ ಸೇರ್ಪಡೆಗೆ ವಿರೋಧ: ಕಾರ್ಯಕರ್ತರ ಪ್ರತಿಭಟನೆ

ಬೀದರ್: ಜೆಡಿಎಸ್‌ ಶಾಸಕ ಮಲ್ಲಿಕಾರ್ಜುನ ಖೂಬಾ ಅವರನ್ನು ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳುವುದನ್ನು ವಿರೋಧಿಸಿ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಇಲ್ಲಿಯ ಪಕ್ಷದ ಜಿಲ್ಲಾ ಕಚೇರಿ ಎದುರು ಭಾನುವಾರ ಪ್ರತಿಭಟನೆ ನಡೆಸಿದರು.

‘ಖೂಬಾ ಅವರು ಭ್ರಷ್ಟಾಚಾರ, ಓಟಿಗಾಗಿ ನೋಟು ಪ್ರಕರಣದಲ್ಲಿ ಸಿಲುಕಿ ಬಸವಕಲ್ಯಾಣ ಕ್ಷೇತ್ರದ ಮತದಾರರ ವಿಶ್ವಾಸ ಕಳೆದುಕೊಂಡಿದ್ದಾರೆ.  ನಾಲ್ಕೂವರೆ ವರ್ಷಗಳಲ್ಲಿ ಕ್ಷೇತ್ರದಲ್ಲಿ ಸಂಚರಿಸಿರುವುದು ಬಹಳ ಕಡಿಮೆ. ಅಲ್ಲದೆ ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ಹೇಳಿಕೆ ನೀಡಿ ಅವರನ್ನು ಅವಮಾನಿಸುತ್ತ ಬಂದಿದ್ದಾರೆ. ಹೀಗಾಗಿ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಬಾರದು’ ಎಂದು ಆಗ್ರಹಿಸಿದರು.

ಕಾರ್ಯಕರ್ತರಾದ ಸಂತೋಷ ಬಿರಾದಾರ, ಭಗವಾನ ಪಾಟೀಲ, ಸಂಜಯ್, ವೆಂಕಟ್‌, ರಾಜಕುಮಾರ, ಸಚಿನ್‌ ಸ್ವಾಮಿ, ವಿಶ್ವ, ಪ್ರದೀಪ, ಶಿವ, ಸಿದ್ರಾಮ, ಬಾಲಾಜಿ, ಸುಭಾಷ ಇದ್ದರು.

ಪ್ರತಿಕ್ರಿಯಿಸಿ (+)