ವಾಟ್ಸ್‌ಆ್ಯಪ್‌ ಗ್ರೂಪ್‌ಗೆ ಸೇರದ ಗೆಳೆಯನ ಮೇಲೆ ಹಲ್ಲೆ

7

ವಾಟ್ಸ್‌ಆ್ಯಪ್‌ ಗ್ರೂಪ್‌ಗೆ ಸೇರದ ಗೆಳೆಯನ ಮೇಲೆ ಹಲ್ಲೆ

Published:
Updated:

ಬೆಂಗಳೂರು: ವಾಟ್ಸ್‌ಆ್ಯಪ್‌ ಗ್ರೂಪ್‌ಗೆ ಸೇರಲಿಲ್ಲ ಎಂಬ ಕಾರಣಕ್ಕೆ ದೀಪಾಂಕರ್‌ ದಾಸ್ (19) ಎಂಬುವರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಲಕ್ಷ್ಮಣನಾಥ್‌ (25) ವಿರುದ್ಧ ಹಲಸೂರು ಗೇಟ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಸ್ಸಾಂನ ದೀಪಾಂಕರ್‌, ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದ ಆವರಣದಲ್ಲಿರುವ ಕರ್ನಾಟಕ ಬ್ಯಾಂಕ್‌ ಎಟಿಎಂ ಘಟಕದಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದಾರೆ. ಆರೋಪಿ ಲಕ್ಷ್ಮಣನಾಥ್‌ ಅವರೂ ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ನ ಭದ್ರತಾ ಸಿಬ್ಬಂದಿ. ಅವರಿಬ್ಬರೂ ಎರಡು ವರ್ಷಗಳಿಂದ ಪರಿಚಯಸ್ಥರು ಎಂದು ಪೊಲೀಸರು ತಿಳಿಸಿದರು.

ಮಾ. 29ರಂದು ಸಂಜೆ 6 ಗಂಟೆಗೆ ಕರ್ನಾಟಕ ಬ್ಯಾಂಕ್‌ ಎಟಿಎಂ ಘಟಕಕ್ಕೆ ಹೋಗಿದ್ದ ಆರೋಪಿಗೆ ‘ಗ್ರೂಪ್‌ನಲ್ಲಿ ಸೇರಿಸುವುದು ಬೇಡ’ ಎಂದು ದೀಪಾಂಕರ್ ಹೇಳಿದ್ದರು. ‘ಅಷ್ಟಕ್ಕೆ ಜಗಳ ತೆಗೆದಿದ್ದ ಆರೋಪಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ದೊಣ್ಣೆಯಿಂದ ಹಣೆಗೆ ಹೊಡೆದಿದ್ದರು ’ ಎಂದು ಪೊಲೀಸರು ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry