ಬುಧವಾರ, ಆಗಸ್ಟ್ 5, 2020
21 °C

ರಾಜ್ಯದಲ್ಲಿ ಪೊಲೀಸ್ 'ಧ್ವಜ ದಿನಾಚರಣೆ'

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಜ್ಯದಲ್ಲಿ ಪೊಲೀಸ್ 'ಧ್ವಜ ದಿನಾಚರಣೆ'

ಬೆಂಗಳೂರು: ತುಮಕೂರು, ಬೆಳಗಾವಿ, ಹುಬ್ಬಳ್ಳಿ, ಕಲಬುರ್ಗಿ ಸೇರಿ ರಾಜ್ಯದ ಹಲವೆಡೆ ಸೋಮವಾರ ಪೊಲೀಸ್ ಧ್ವಜ ದಿನಾಚರಣೆ ಆಚರಿಸಲಾಯಿತು.

ತುಮಕೂರಿನ ಜಿಲ್ಲಾ ಕವಾಯತು ಮೈದಾನದಲ್ಲಿ ನಡೆದ ಪೊಲೀಸ್ ಧ್ವಜ ದಿನ ಕಾರ್ಯಕ್ರಮದಲ್ಲಿ ನಿವೃತ್ತ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಿ.ಬಿ ಮಂಜುನಾಥ್ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾ ಗೋಪಿನಾಥ್ ಮಾತನಾಡಿ, ‘ಪೊಲೀಸ್  ಕಲ್ಯಾಣ ನಿಧಿಯಲ್ಲಿ ನಿಶ್ಚಿತ ಠೇವಣಿ ₹ 21.82 ಲಕ್ಷ, ₹ 1.55 ಲಕ್ಷ ಉಳಿತಾಯ ಖಾತೆಯಲ್ಲಿದೆ. 2017ರಲ್ಲಿ ಧ್ವಜ ಮಾರಾಟದಿಂದ ₹ 4.13 ಲಕ್ಷ ಸಂಗ್ರಹವಾಗಿದೆ. 1000 ನಿವೃತ್ತರಿಗೆ ಉಚಿತ ಆರೋಗ್ಯ ತಪಾಸಣೆ ಮಾಡಲಾಗಿದೆ’ ಎಂದು ಹೇಳಿದರು.

2017-18 ರಲ್ಲಿ ನಿವೃತ್ತರಾದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ ಸನ್ಮಾನ ಮಾಡಲಾಯಿತು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶೋಭಾರಾಣಿ ವೇದಿಕೆಯಲ್ಲಿದ್ದರು.

ಬೆಳಗಾವಿ: ಇಲ್ಲಿನ ಜಿಲ್ಲಾ ಕವಾಯತು ಮೈದಾನದಲ್ಲಿ ಪೊಲೀಸ್ ಧ್ವಜ ದಿನಾಚರಣೆ ಆಚರಿಸಲಾಯಿತು. ಉತ್ತರ ವಲಯ ಐಜಿಪಿ ಅಲೋಕ್ ಕುಮಾರ್, ನಗರ ಪೊಲೀಸ್ ಆಯುಕ್ತ ಡಿ.ಸಿ. ರಾಜಪ್ಪ, ಡಿಸಿಪಿಗಳಾದ ಸೀಮಾ ಲಾಟ್ಕರ್, ಮಹಾನಿಂಗ ನಂದಗಾವಿ ಪೊಲೀಸ್‌ ಸಿಬ್ಬಂದಿ ಪಥಸಂಚಲನದಲ್ಲಿ ಭಾಗವಹಿಸಿದರು.

ಕಲಬುರ್ಗಿ: ಇಲ್ಲಿನ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಕವಾಯತು ಮೈದಾನದಲ್ಲಿ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಈಶಾನ್ಯ ವಲಯ ಐಜಿಪಿ ಎಸ್.ಮುರುಗನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಶಶಿಕುಮಾರ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಯಪ್ರಕಾಶ್, ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಬಿ.ಜೆ.ಲೋಕೇಶ್ ಭಾಗವಹಿಸಿದ್ದರು.

*

ಹುಬ್ಬಳ್ಳಿ: ಇಲ್ಲಿನ ಕಾರವಾರ ರಸ್ತೆಯಲ್ಲಿರುವ ಸಿಎಆರ್ ಮೈದಾನದಲ್ಲಿ ಪೊಲೀಸ್ ಧ್ವಜ ದಿನ ಕಾರ್ಯಕ್ರಮ ನಡೆಯುತ್ತಿದೆ. ನಿವೃತ್ತ ಐಪಿಎಸ್ ಅಧಿಕಾರಿ ಪಾಂಡುರಂಗ ರಾಣೆ, ಹುಬ್ಬಳ್ಳಿ, ಧಾರವಾಡ ಮಹಾನಗರ ಕಮಿಷನರ್ ನಾಗರಾಜ, ಡಿವೈಎಸ್ಪಿಗಳಾದ ರೇಣುಕಾ ಸುಕುಮಾರ, ಬಿ.ಎಸ್. ನೇಮಗೌಡ ಭಾಗವಹಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.