ಸೋಮವಾರ, ಡಿಸೆಂಬರ್ 9, 2019
22 °C

ಎಸ್‌ಸಿ, ಎಸ್‌ಟಿ ಕಾಯ್ದೆ: ದಲಿತ ಸಂಘಟನೆಗಳಿಂದ ‘ಭಾರತ್‌ ಬಂದ್‌’

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ಎಸ್‌ಸಿ, ಎಸ್‌ಟಿ ಕಾಯ್ದೆ: ದಲಿತ ಸಂಘಟನೆಗಳಿಂದ ‘ಭಾರತ್‌ ಬಂದ್‌’

ಚಂಡೀಗಢ/ನವದೆಹಲಿ: ಎಸ್‌ಸಿ, ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆ–1989 ದುರ್ಬಲಗೊಳಿಸಿರುವ ಸಂಬಂಧ ಹಲವು ದಲಿತ ಸಂಘಟನೆಗಳು ಸೋಮವಾರ ಭಾರತ ಬಂದ್‌ಗೆ ಕರೆ ನೀಡಿದ್ದು, ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ.

ಪರಿಶಿಷ್ಟ ಜಾತಿ, ಪಂಗಡಗಳ ಜನರ ಮೇಲಿನ ದೌರ್ಜನ್ಯದ ಬಗ್ಗೆ ದೂರು ನೀಡಿದ ಕೂಡಲೇ ಆರೋಪಿಗಳ ಬಂಧನ ಮತ್ತು ಪ್ರಕರಣ ದಾಖಲು ಅಗತ್ಯ ಇಲ್ಲ ಎಂದು ಸುಪ್ರೀಂ ಕೋರ್ಟ್‌ ಆದೇಶಿಸಿತ್ತು. ಈ ಕಾಯ್ದೆಗೆ ಹೊಸ ನಿಯಮಗಳನ್ನು ರೂಪಿಸುವ ಬಗ್ಗೆಯೂ ಕೋರ್ಟ್‌ ಸರ್ಕಾರಕ್ಕೆ ಸೂಚಿಸಿತ್ತು.

ದಲಿತ ಸಂಘಟನೆಗಳು ಹಾಗೂ ವಿರೋಧ ಪಕ್ಷದ ಒತ್ತಾಯದ ಬಳಿಕ ಕೇಂದ್ರ ಸರ್ಕಾರ ಚರ್ಚೆ ನಡೆಸಿ ದೌರ್ಜನ್ಯ ತಡೆ ಕಾಯ್ದೆ ಕುರಿತು ಸುಪ್ರೀಂ ಕೋರ್ಟ್‌ ತೀರ್ಪಿನ ವಿರುದ್ಧ ಮರು ಪರಿಶೀಲನಾ ಅರ್ಜಿ ಸಲ್ಲಿಸಲು ನಿರ್ಧರಿಸಿತ್ತು.

ಸೋಮವಾರ ಸರ್ಕಾರ ತೀರ್ಪು ಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವುದಾಗಿ ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್‌ ತಿಳಿಸಿದ್ದಾರೆ.

ಈ ನಡುವೆ ದೇಶದ ಹಲವು ಭಾಗಗಳಲ್ಲಿ ದಲಿತ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು, ಕೆಲವೆಡೆ ಪ್ರತಿಭಟನೆ ಹಿಂಸಾರೂಪ ಪಡೆದುಕೊಂಡಿದೆ.

(ಪ್ರತಿಭಟನೆ ವೇಳೆ ಮಧ್ಯಪ್ರದೇಶದಲ್ಲಿ ಕಲ್ಲು ತೂರಾಟ ನಡೆದಿದೆ)

ಪಂಜಾಬ್‌ನಲ್ಲಿ ಸಿಬಿಎಸ್‌ಇ 10ನೇ ತರಗತಿ ಮತ್ತು 12ನೇ ತರಗತಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ ಹಬ್ಬುವುದನ್ನು ತಡೆಯಲು ಮುನ್ನೆಚ್ಚರಿಕಾ ಕ್ರಮವಾಗಿ ಪಂಜಾಬ್‌ ಸರ್ಕಾರ ಸೋಮವಾರ ಸಂಜೆ ವರೆಗೂ ಮೊಬೈಲ್‌ ಇಂಟರ್‌ನೆಟ್‌ ಸೇವೆ ಸ್ಥಗಿತಗೊಳಿಸಿದೆ.

ಕೇರಳದಲ್ಲಿ ಬ್ಯಾಂಕ್‌ ಹಾಗೂ ವಾಣಿಜ್ಯ ಕೇಂದ್ರಗಳು ಕಾರ್ಯನಿರ್ವಹಣೆ ಸ್ಥಗಿತಗೊಳಿಸಿವೆ. ಕೇರಳ ರಾಜ್ಯ ಸರ್ಕಾರದ ಬಸ್‌ ಸೇವೆಯನ್ನೂ ನಿಲ್ಲಿಸಲಾಗಿದೆ

(ಮೀರತ್‌ನಲ್ಲಿ ಲಾಠಿ ಬೀಸಿದ ಪೊಲೀಸರು)

ಒಡಿಶಾದ ಸಂಬಲ್‌ಪುರ, ಪಟಿಯಾಲ, ಬಿಹಾರದಲ್ಲಿ ರೈಲು ತಡೆದು ಪ್ರತಿಭಟಿಸಲಾಗಿದೆ. ಅಮೃತಸರ ಮತ್ತು ಜಲಂಧರ್‌ನಲ್ಲಿ ಶಿಕ್ಷಣ ಸಂಸ್ಥೆಗಳು, ಅಂಗಡಿಗಳು ತೆರೆದಿಲ್ಲ. ಬಿಹಾರದಲ್ಲಿ ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳನ್ನು ಬಂದ್‌ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಾರ್ಮೆರ್‌, ಮೀರತ್‌ನಲ್ಲಿ ಕಾರು, ಮೋಟಾರ್ ಬೈಕ್‌ ಸೇರಿ ಇತರ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಶೋಭಾಪುರ್‌ ಪೊಲೀಸ್‌ ಚೌಕಿಗೂ ಬೆಂಕಿ ಇಟ್ಟಿದ್ದು, ಹಲವೆಡೆ ಸಾರ್ವಜನಿಕರ ಆಸ್ತಿ–ಪಾಸ್ತಿಗೂ ಹಾನಿಯಾಗಿದೆ.

ಆಗ್ರಾ, ಭರತ್‌ಪುರ್‌ನಲ್ಲೂ ಪ್ರತಿಭಟನೆ ಮುಂದುವರಿದಿದೆ. ರಾಂಚಿಯಲ್ಲಿ ಪೊಲೀಸ್‌ ಮತ್ತು ಪ್ರತಿಭಟನಾಕಾರರ ನಡುವೆ ಘರ್ಷಣೆ ಉಂಟಾಗಿದ್ದು, ಹಲವು ಮಂದಿ ಗಾಯಗೊಂಡಿರುವುದಾಗಿ ಎಎನ್‌ಐ ವರದಿ ಮಾಡಿದೆ.

(ಜಾರ್ಖಂಡ್‌)

ಇನ್ನಷ್ಟು: ಜಾತಿ ನಿಂದನೆ ಕಾಯ್ದೆ ದುರ್ಬಳಕೆಗೆ ಅಂಕುಶ

ಪ್ರತಿಕ್ರಿಯಿಸಿ (+)