3ಕ್ಕೆ ಹೊನ್ನಾಳಿಗೆ ರಾಹುಲ್ ಗಾಂಧಿ

7

3ಕ್ಕೆ ಹೊನ್ನಾಳಿಗೆ ರಾಹುಲ್ ಗಾಂಧಿ

Published:
Updated:

ಹೊನ್ನಾಳಿ: ಏಪ್ರಿಲ್ 3ರಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೊನ್ನಾಳಿಗೆ ಬರಲಿದ್ದಾರೆ ಎಂದು ಶಾಸಕ ಡಿ.ಜಿ. ಶಾಂತನಗೌಡ ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.ಹುಬ್ಬಳ್ಳಿಗೆ ವಿಮಾನದಲ್ಲಿ ಬಂದಿಳಿಯುವ ರಾಹುಲ್ ಗಾಂಧಿ ನೇರವಾಗಿ ಶಿವಮೊಗ್ಗಕ್ಕೆ ತೆರಳುವರು. ಅಲ್ಲಿಂದ ಸವಳಂಗ, ನ್ಯಾಮತಿಯಲ್ಲಿ ರೋಡ್ ಶೋ ನಡೆಸಿ, ಹೊನ್ನಾಳಿಗೆ ಮಧ್ಯಾಹ್ನ 1.30ಕ್ಕೆ ಬಂದು ಪ್ರಮುಖ ರಸ್ತೆಗಳಲ್ಲಿ ರೋಡ್ ಶೋ ನಡೆಸಲಿದ್ದಾರೆ. ನಂತರ ಎಲ್‌ಐಸಿ ಕಚೇರಿ ಪಕ್ಕದ ಮೈದಾನದಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪಕ್ಷದ ಜಿಲ್ಲಾ ಅಧ್ಯಕ್ಷ ಎಚ್.ಬಿ.ಮಂಜಪ್ಪ ಹೇಳಿದರು.ನಂತರ ಮಲೇಬೆನ್ನೂರು, ಹರಿಹರದಲ್ಲಿ ರೋಡ್ ಶೋ ನಡೆಸಿ, ದಾವಣಗೆರೆಯಲ್ಲಿ ಸಂಜೆ 5 ಗಂಟೆಗೆ ನಡೆಯುವ ಸಭೆಯಲ್ಲಿ ಭಾಗವಹಿಸುವರು ಎಂದು ಕೆಪಿಸಿಸಿ ವೀಕ್ಷಕ ಶ್ರೀನಾಥ್‌ ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry