ನೀತಿಸಂಹಿತೆ: ವಾಹನಗಳ ತಪಾಸಣೆ

7

ನೀತಿಸಂಹಿತೆ: ವಾಹನಗಳ ತಪಾಸಣೆ

Published:
Updated:

ಕುಮಾರಪಟ್ಟಣ: ರಾಜ್ಯ ವಿಧಾನಸಭಾ ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ಸಮೀಪದ ರಾಷ್ಟ್ರೀಯ ಹೆದ್ದಾರಿ 4ರ ಮಾಕನೂರು ಕ್ರಾಸ್‌ನಲ್ಲಿ ಚುನಾವಣಾ ಅಧಿಕಾರಿಗಳ ಎರಡು ತಂಡ ವಾಹನಗಳ ತಪಾಸಣೆ ನಡೆಸುತ್ತಿದೆ.ಬೆಂಗಳೂರು–ಪುಣೆ ಮಾರ್ಗವಾಗಿ ಸಂಚರಿಸುವ ಎಲ್ಲ ವಾಹನಗಳನ್ನು ತಡೆದು ತಪಾಸಣೆ ನಡೆಸಲಾಗುತ್ತಿದೆ.ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯ, ಮಾಕನೂರು ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ನಾಗರಾಜ ಕೆ.ಬಿ., ಚಳಗೇರಿ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ವೆಂಕಟೇಶ್ ಉಕ್ಕಡಗಾತ್ರಿ, ಕುಮಾರಪಟ್ಟಣ ಪೊಲೀಸ್ ಠಾಣೆ ಕಾನ್‌ಸ್ಟೆಬಲ್ ಎನ್.ಆರ್.ನಾಯ್ಕ್, ಅಬಕಾರಿ ಗಾರ್ಡ್ ಸೋಮಶೇಖರ್ ತಂಡದಲ್ಲಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry