ಮಂಗಳವಾರ, ಆಗಸ್ಟ್ 11, 2020
27 °C

ದೇಶದಾದ್ಯಂತ ದಲಿತ ಸಂಘಟನೆಗಳ ಪ್ರತಿಭಟನೆ: ಮಧ್ಯ ಪ್ರದೇಶದಲ್ಲಿ 4 ಮಂದಿ ಸಾವು; ಅಂತರ್ಜಾಲ ಸೇವೆ ಸ್ಥಗಿತ

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ದೇಶದಾದ್ಯಂತ ದಲಿತ ಸಂಘಟನೆಗಳ ಪ್ರತಿಭಟನೆ: ಮಧ್ಯ ಪ್ರದೇಶದಲ್ಲಿ 4 ಮಂದಿ ಸಾವು; ಅಂತರ್ಜಾಲ ಸೇವೆ ಸ್ಥಗಿತ

ನವದೆಹಲಿ: ದಲಿತ ಸಂಘಟನೆಗಳು ಸೋಮವಾರ ದೇಶದಾದ್ಯಂತ ನಡೆಸಿರುವ ಪ್ರತಿಭಟನೆ ಹಿಂಸಾರೂಪ ಪಡೆದಿದ್ದು, ನಾಲ್ಕು ಮಂದಿ ಮೃತಪಟ್ಟಿದ್ದಾರೆ. ಪೊಲೀಸರು ಸೇರಿ ಹಲವರು ಗಾಯಗೊಂಡಿದ್ದಾರೆ.

ಎಸ್‌ಸಿ, ಎಸ್‌ಟಿ ಕಾಯ್ದೆ ದುರ್ಬಲಗೊಳಿಸುವುದನ್ನು ವಿರೋಧಿಸಿ ಕರೆ ನೀಡಲಾಗಿದ್ದ ಭಾರತ್ ಬಂದ್‌ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವಿನ ಘರ್ಷಣೆಗೆ ಸಾಕ್ಷಿಯಾಯಿತು. ಮಧ್ಯ ಪ್ರದೇಶದ ಗ್ವಾಲಿಯರ್‌ನಲ್ಲಿ ಇಬ್ಬರು, ಭಿಂದ್‌ ಮತ್ತು ಮುರೇನಾದಲ್ಲಿ ತಲಾ ಒಬ್ಬ ಪ್ರತಿಭಟನಾಕಾರ ಮೃತಪಟ್ಟಿರುವುದಾಗಿ ಮಧ್ಯಪ್ರದೇಶ ಐಜಿ ಮಾಹಿತಿ ನೀಡಿದ್ದಾರೆ.

ಹರಿಯಾಣದಲ್ಲಿ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಚಾರ್ಜ್‌ ಮಾಡಿದ್ದಾರೆ. ಉತ್ತರ ಪ್ರದೇಶದ ಅಝಮ್‌ಗಢದಲ್ಲಿ ಉತ್ತರ ಪ್ರದೇಶ ಸಾರಿಗೆ ಸಂಸ್ಥೆಯ ಬಸ್‌ ಮೇಲೆ ಕಲ್ಲು ತೂರಿ ಬೆಂಕಿ ಹಚ್ಚಲಾಗಿದೆ. ಮುಝಾಫರ್‌ನಗರದಲ್ಲಿ ರಸ್ತೆ ಬದಿಯಲ್ಲಿ ಅನೇಕ ವಾಹನಗಳಿಗೆ ಕಿಡಿಗೇಡಿಗಳು ಬೆಂಕಿ ಇಟ್ಟಿದ್ದಾರೆ.

(ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಗುಂಡು ಸಿಡಿಸಿ ದುಷ್ಕರ್ಮಿಗಳನ್ನು ಚದುರಿಸುವ ಪ್ರಯತ್ನ )

ಮಧ್ಯ ಪ್ರದೇಶದ ಗ್ವಾಲಿಯರ್‌ನಲ್ಲಿ 19ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮಂಗಳವಾರ ಬೆಳಿಗ್ಗೆ 6ರ ವರೆಗೂ ಇಲ್ಲಿ ಅಂತರ್ಜಾಲ ಸೇವೆ ಸ್ಥಗಿತಗೊಳಿಸಲಾಗಿದೆ.

ಎಸ್‌ಸಿ, ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆ–1989 ಸಂಬಂಧಿಸಿದಂತೆ ನೀಡಿದ್ದ ತೀರ್ಪಿನ ಮರುಪರಿಶೀಲನೆಗೆ ಸಲ್ಲಿಸಲಾದ ಮನವಿಯ ಶೀಘ್ರ ವಿಚಾರಣೆಗೆ ಸುಪ್ರೀಂ ಕೋರ್ಟ್‌ ಅಸಮ್ಮತಿಸಿದೆ.

* ದೌರ್ಜನ್ಯ ತಡೆ ಕಾಯ್ದೆ ದುರ್ಬಲಗೊಳಿಸುವುದರ ವಿರುದ್ಧದ ಹೋರಾಟಕ್ಕೆ ನನ್ನ ಬೆಂಬಲವಿದೆ. ಪ್ರತಿಭಟನೆ ವೇಳೆ ಕೆಲವರು ಹಿಂಸಾಚಾರಕ್ಕೆ ಮುಂದಾಗಿರುವುದು ತಿಳಿದಿದೆ. ನಮ್ಮ ಪಕ್ಷ ಹಿಂಸಾಚಾರಕ್ಕೆ ಪ್ರಚೋದನೆ ನೀಡಿಲ್ಲ.
–ಮಾಯಾವತಿ, ಬಿಎಸ್‌ಪಿ ಮುಖ್ಯಸ್ಥೆ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.