ನುಡಿದಂತೆ ನಡೆದ ಸರ್ಕಾರ: ಹಿಟ್ನಾಳ

7

ನುಡಿದಂತೆ ನಡೆದ ಸರ್ಕಾರ: ಹಿಟ್ನಾಳ

Published:
Updated:

ಕೊಪ್ಪಳ: 'ಜನರಿಗೆ ಚುನಾವಣಾ ಪೂರ್ವದಲ್ಲಿ ನೀಡಿದ ಭರವಸೆಗಳನ್ನು ಕಾಂಗ್ರೆಸ್‍ ಸರ್ಕಾರ ಈಡೇರಿಸಿದೆ. ಆದರಿಂದ ಕಾಂಗ್ರೆಸ್ ನುಡಿದಂತೆ ನಡೆದ ಸರ್ಕಾರ' ಎಂದು ಶಾಸಕ ರಾಘವೇಂದ್ರ ಹಿಟ್ನಾಳ್‍ ಹೇಳಿದರು.ತಾಲ್ಲೂಕಿನ ಅಳವಂಡಿ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಗುಡಗೇರಿ ಹಾಗೂ ಕವಲೂರ ಗ್ರಾಮದಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು  ಮಾತನಾಡಿದರು.

'ಅನ್ನಭಾಗ್ಯ, ಮೈತ್ರಿ, ಮನಶ್ವಿನಿ, ಅಲ್ಪಸಂಖ್ಯಾತರ ಕಲ್ಯಾಣ, ಉನ್ನತ ಶಿಕ್ಷಣ, ವಿದ್ಯಾಸಿರಿ, ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸರ್ವಾಂಗೀಣ ಅಭಿವೃದ್ಧಿಗೆ ಅನೇಕ ಜನಪರ ಯೋಜನೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ  ನೀಡಿದ್ದಾರೆ. ದೇಶದ ಅರ್ಥವ್ಯವಸ್ಥೆಯಲ್ಲಿ ರಾಜ್ಯವನ್ನು ಪ್ರಥಮ ಸ್ಥಾನಕ್ಕೆ ತಂದ ಹೆಗ್ಗಳಿಕೆ ಕಾಂಗ್ರೆಸ್ ಸರ್ಕಾರಕ್ಕೆ ಸಲ್ಲುತ್ತದೆ. ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ವಿಶೇಷವಾಗಿ ನೀರಾವರಿ ಯೋಜನೆಗಳು, ಶೈಕ್ಷಣಿಕ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಬಿಡುಗಡೆಯಾಗಿದೆ' ಎಂದು ಅವರು ಸರ್ಕಾರದ ಸಾಧನೆಯನ್ನು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಕೆ.ರಾಜಶೇಖರ ಹಿಟ್ನಾಳ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಭೂಮರಡ್ಡಿ, ತಾಲ್ಲೂಕು ಪಂಚಾಯಿತಿ ಸದಸ್ಯ ಸಿದ್ದಲಿಂಗಸ್ವಾಮಿ ಇನಾಮದಾರ, ಯುವ ಕಾಂಗ್ರೆಸ್ ಅಧ್ಯಕ್ಷ ಕುರುಗೋಡ ರವಿ,ಮುಖಂಡರಾದ ಪ್ರಸನ್ನ ಗಡಾದ, ಭರಮಪ್ಪ ನಗರ, ಬಸವರಾಜ ಹಾರೋಗೇರಿ,ಕುಮಾರ ಮಜ್ಜಿಗಿ, ನಜೀರ ಅಳವಂಡಿ, ವಕ್ತಾರ್ ಅಕ್ಬರ್ ಪಾಷಾ ಪಲ್ಟನ್ ಮುಂತಾದವರು ಸಭೆಯಲ್ಲಿ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry