ಖೂಬಾ ಬಿಜೆಪಿ ಸೇರ್ಪಡೆ ವಿರೋಧಿಸಿ ಆತ್ಮಹತ್ಯೆಗೆ ಯತ್ನ

7

ಖೂಬಾ ಬಿಜೆಪಿ ಸೇರ್ಪಡೆ ವಿರೋಧಿಸಿ ಆತ್ಮಹತ್ಯೆಗೆ ಯತ್ನ

Published:
Updated:

ಬಸವಕಲ್ಯಾಣ (ಬೀದರ್‌ ಜಿಲ್ಲೆ): ಶಾಸಕ ಮಲ್ಲಿಕಾರ್ಜುನ ಖೂಬಾ ಬಿಜೆಪಿ ಸೇರ್ಪಡೆಯನ್ನು ವಿರೋಧಿಸಿ ಸೋಮವಾರ ಇಲ್ಲಿ ನಡೆದ ಪ್ರತಿಭಟನೆ ಸಂದರ್ಭದಲ್ಲಿ ಪಕ್ಷದ ನಗರ ಘಟಕದ ಪ್ರಧಾನ ಕಾರ್ಯದರ್ಶಿ ಕೃಷ್ಣಾ ಗೋಣೆ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದರು.

ಗೋಣೆ ಅವರು ಕ್ಯಾನ್‌ನಲ್ಲಿ ತಂದಿದ್ದ ಪೆಟ್ರೋಲ್ ಅನ್ನು ಮೈಮೇಲೆ ಸುರಿದುಕೊಂಡರು. ಪಕ್ಕದಲ್ಲೇ ಇದ್ದ ಕಾರ್ಯಕರ್ತರು ತಕ್ಷಣ ಅವರನ್ನು ತಡೆದರು.

ಸ್ಥಳಕ್ಕೆ ಬಂದ ಶಾಸಕರ ಕೆಲ ಬೆಂಬಲಿಗರು ಪ್ರತಿಭಟನೆಗೆ ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಕೆಲಕಾಲ ಬಿಗುವಿನ ವಾತಾವರಣ ಉಂಟಾಗಿತ್ತು.

ಖೂಬಾ ಬಿಜೆಪಿ ಸೇರಲು ಬೆಂಗಳೂರಿಗೆ ಹೊರಟಿರುವ ವಿಷಯ ತಿಳಿದು ಮುಖ್ಯರಸ್ತೆ ಸಮೀಪದ ಆರ್ಯ ಸಮಾಜ ಭವನದ ಎದುರು ಸೇರಿದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry