ಸ್ವರಾಜ್ ಇಂಡಿಯಾ: ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಇಂದು‌‌

7

ಸ್ವರಾಜ್ ಇಂಡಿಯಾ: ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಇಂದು‌‌

Published:
Updated:

ಮಂಡ್ಯ: ರಾಜ್ಯದ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ಸ್ವರಾಜ್‌ ಇಂಡಿಯಾ ಪಕ್ಷದಿಂದ ಸ್ಪರ್ಧಿಸುವ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪಕ್ಷದ ಸಂಸ್ಥಾಪಕ ಅಧ್ಯಕ್ಷ ಯೋಗೇಂದ್ರ ಯಾದವ್‌ ಇಂದು ಬೆಂಗಳೂರಿನಲ್ಲಿ ಬಿಡುಗಡೆ ಮಾಡಲಿದ್ದಾರೆ.

‘ಯಾದವ್‌ ಮಂಗಳವಾರದಿಂದ ನಾಲ್ಕು ದಿನಗಳ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಮಂಗಳವಾರ ಸ್ವರಾಜ್‌ ಇಂಡಿಯಾ ಪಕ್ಷದ ಪದಾಧಿಕಾರಿಗಳ ಹೆಸರು ಘೋಷಣೆ ಮಾಡಲಿದ್ದು, ಅಭ್ಯರ್ಥಿಗಳ ಪಟ್ಟಿಯನ್ನೂ ಬಿಡುಗಡೆ ಮಾಡುವರು. ನಂತರ ಪಕ್ಷದ ರಾಜ್ಯ ಕಾರ್ಯಕಾರಿಣಿಯಲ್ಲಿ ಭಾಗವಹಿಸುವರು’ ಎಂದು ಸೋಮವಾರ ರೈತ ಸಂಘದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಬಡಗಲಪುರ ನಾಗೇಂದ್ರ ಹೇಳಿದರು.

‘65 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲು ಅಭ್ಯರ್ಥಿಗಳು ಮುಂದೆ ಬಂದಿದ್ದಾರೆ. ಆದರೆ, ಕೆಲವೇ ಕ್ಷೇತ್ರಗಳಿಗೆ ಸೀಮಿತಗೊಳಿಸಲು ಮುಖಂಡರು ನಿರ್ಧಾರಿಸಿದ್ದಾರೆ. ನಾಲ್ಕು ದಿನಗಳ ಪ್ರವಾಸದಲ್ಲಿ ಪಕ್ಷದ ಅಧ್ಯಕ್ಷೀಯ ಮಂಡಳಿ ಸದಸ್ಯ ದೇವನೂರ ಮಹಾದೇವ, ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರಾದ ಕೆ.ಪಿ.ಸಿಂಗ್‌, ಮನೋಹರ್‌, ಪುಷ್ಪಾ ಭಾಗವಹಿಸುವರು’ ಎಂದು ತಿಳಿಸಿದರು.

ಏ. 4ರಂದು ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ದರ್ಶನ್‌ ಪುಟ್ಟಣ್ಣಯ್ಯ ಪರ ಪ್ರಚಾರ ಮಾಡಲಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry