7

ಸ್ಮಿತ್ ಬದಲಿಗೆ ಕ್ಲಾಸೆನ್‌

Published:
Updated:

ನವದೆಹಲಿ (ಪಿಟಿಐ): ಚೆಂಡು ವಿರೂಪ ಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿ ಶಿಕ್ಷೆಗೆ ಒಳಗಾಗಿರುವ ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ ಬದಲಿಗೆ ದಕ್ಷಿಣ ಆಫ್ರಿಕಾದ ಹೆನ್ರಿಕ್ ಕ್ಲಾಸೆನ್ ಐಪಿಎಲ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಸೇರಲಿದ್ದಾರೆ.

ಸ್ಮಿತ್ ಅವರನ್ನು ಚೆಂಡು ವಿರೂಪ ಗೊಳಿಸಿದ ಪ್ರಕರಣ ಬಯಲಾಗುತ್ತಿದ್ದಂತೆ ರಾಯಲ್ಸ್ ತಂಡದ ನಾಯಕ ಸ್ಥಾನ ದಿಂದ ವಜಾಗೊಳಿಸಲಾಗಿತ್ತು. ಕ್ರಿಕೆಟ್‌ ಆಸ್ಟ್ರೇಲಿಯಾ ಅವರ ಮೇಲೆ ಒಂದು ವರ್ಷದ ನಿಷೇಧ ಹೇರಿದ ನಂತರ ರಾಯಲ್ಸ್ ತಂಡದಿಂದಲೇ ಹೊರಗಿಡಲಾ ಗಿತ್ತು.

‘ದಕ್ಷಿಣ ಆಫ್ರಿಕಾದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಆಗಿರುವ ಕ್ಲಾಸೆನ್‌ ಅವ ರನ್ನು ನೋಂದಾಯಿತ ಆಟಗಾರರ ಪಟ್ಟಿಯಿಂದ ₹ 50 ಲಕ್ಷ ಬೆಲೆಗೆ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ’ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ ಪ್ರಕಟಣೆ ತಿಳಿಸಿದೆ.

ಇತ್ತೀಚೆಗೆ ಭಾರತ ವಿರುದ್ಧ ನಡೆದ ಏಕದಿನ ಸರಣಿಯಲ್ಲಿ ಕ್ಲಾಸೆನ್ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿ ದ್ದರು.

ಎರಡನೇ ಪಂದ್ಯದಲ್ಲಿ ಅವರು ಪಂದ್ಯಶ್ರೇಷ್ಠ ಪ್ರಶಸ್ತಿ ಗಳಿಸಿದ್ದರು. ನಂತರ ಮೂರು ಪಂದ್ಯಗಳ ಸರಣಿಯಲ್ಲಿ ಟ್ವೆಂಟಿ–20 ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು. ಈ ವರೆಗೆ ಒಟ್ಟು ನಾಲ್ಕು ಏಕದಿನ ಮತ್ತು ಮೂರು ಟ್ವೆಂಟಿ–20 ಪಂದ್ಯಗಳನ್ನು ಅವರು ಆಡಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry